ಪುತ್ತೂರು: ಬೆಂಗಳೂರಿನ ವ್ಯಕ್ತಿಯೊಬ್ಬರ ಶವವೊಂದು ಅ.18ರ ಮಂಗಳವಾರ ಮಧ್ಯರಾತ್ರಿ ದರ್ಬೆಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವ್ಯಕ್ತಿಗೆ ಸುಮಾರು 51 ವರ್ಷ ವಯಸ್ಸಾಗಿದೆ ಎಂದು ಶಂಕಿಸಲಾಗಿದೆ. ಭಾನುವಾರ ಅವರು ದರ್ಬೆಯಲ್ಲಿ ಒಂದು ಲಾಡ್ಜ್ ಬುಕ್ ಮಾಡಿದ್ದರು. ಅವರ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರನ್ನು ಗುರುತಿಸಲು ತನಿಖೆ ನಡೆಯುತ್ತಿದೆ.