News Karnataka Kannada
Friday, May 03 2024
ಮಂಗಳೂರು

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತರು ನೀಚ ಕೃತ್ಯಕ್ಕೆ ಕೈ ಹಾಕುವುದಿಲ್ಲ- ಶಾಸಕ ಅಶೋಕ್ ರೈ

Congress workers will not indulge in heinous acts, says MLA Ashok Rai
Photo Credit : News Kannada

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಇದನ್ನು ನಾನು ಖಂಡಿಸುತ್ತೇನೆ.

ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಇಂತಹ ನೀಚ‌ಕೃತ್ಯಕ್ಕೆ ಕೈ ಹಾಕುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ಅಶೋಕ್ ರೈ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು