Categories: ಮಂಗಳೂರು

ಪುತ್ತೂರು: ಲಂಚ ಆರೋಪ, ಮರಣೋತ್ತರ ಪರೀಕ್ಷೆ ನಡೆಸದೇ ಪ್ರತಿಭಟಿಸಿದ ಆಸ್ಪತ್ರೆ ನೌಕರರು

ಪುತ್ತೂರು: ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲೆ ವಿನಾಕಾರಣ ಲಂಚದ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಮರಣೋತ್ತರ ಪರೀಕ್ಷೆ ಮಾಡದೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ.

ಎರಡು ಶವದ ಮರಣೋತ್ತರ ಪರೀಕ್ಷೆ ಮಾಡದೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ಸಾಕ್ಷ್ಯಗಳಿಲ್ಲದೆ ಏಕಾಏಕಿ ಲಂಚದ ಆರೋಪ ಮಾಡಿದ ಕಲಿಯುಗ ಸೇವಾ ಸಮಿತಿಯ ವಿರುದ್ಧ ಸಿಬ್ಬಂದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿಗಳ ಪ್ರತಿಭಟನೆಯಿಂದ ಮರಣೋತ್ತರ ಪರೀಕ್ಷೆಗೆ ಶವ ತಂದವರ ಕುಟುಂಬಸ್ಥರು ಹೈರಾಣಾಗಿದ್ದು, ಕುಟುಂಬದ ಸದಸ್ಯ ಮರಣಹೊಂದಿದ ದುಃಖದ ನಡುವೆ ಮರಣೋತ್ತರ ಪರೀಕ್ಷೆಗೆ ಬಂದರೂ ಆಸ್ಪತ್ರೆಯವರ ಪ್ರತಿಭಟನೆಯಿಂದಾಗಿ ಮತ್ತೊಮ್ಮೆ ಮನನೊಂದುಕೊಳ್ಳುವಂತಾಗಿದೆ. ಕಲಿಯುಗ ಸೇವಾ ಸಮಿತಿ ನಮ್ಮ ಮೇಲೆ ಮಾಡಿದ ಲಂಚದ ಆರೋಪಕ್ಕೆ ಸಾಕ್ಷ್ಯ ನೀಡಲಿ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾಕ್ಷ್ಯವನ್ನಿಟ್ಟು ಮಾತನಾಡಲಿ, ಇಲ್ಲವಾದಲ್ಲಿ ಮರಣೋತ್ತರ ಪರೀಕ್ಷೆ ಮಾಡುವುದಿಲ್ಲ ಎಂದು ಪಟ್ಟುಹಿಡಿದರು. ಕೊನೇ ಕ್ಷಣದಲ್ಲಿ ವೈದ್ಯರು ಹೊರಗುತ್ತಿಗೆ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು. ನಿಮ್ಮ ಜೊತೆ ನಾವಿದ್ದೇವೆ ನಮಗೂ ಕಲಿಯುಗ ಸಮಿತಿಯವರು ಲಂಚದ ಆರೋಪ ಮಾಡಿದ್ದಾರೆ. ನಾವು ಪ್ರತಿಭಟಿಸದೆ ಈಗ ಇರುವ ಎರಡು ಶವದ ಮರಣೋತ್ತರ ಪರೀಕ್ಷೆ ಮಾಡಬೇಕಿದೆ ಎಂದು ವೈದ್ಯರು ಆಗ್ರಹಿಸಿದರು. ವೈದ್ಯರ ಮಾತಿಗೆ ಬೆಲೆ ಕೊಟ್ಟು ಪ್ರತಿಭಟನೆ ನೌಕರರು ಪ್ರತಿಭಟನೆ ಹಿಂಪಡೆದರು.

Ashika S

Recent Posts

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

5 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

22 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

41 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago