ಪುತ್ತೂರು: ವಿಧಾನಸಭೆ ಚುನಾವಣೆಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿಯ ಚಿಹ್ನೆ, ಪಕ್ಷದ ಹೆಸರು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಗ್ರಿ, ಸಾಮಾಜಿಕ ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು, ಭಾವಚಿತ್ರವನ್ನು ಉಪಯೋಗಿಸುತ್ತಿದ್ದಾರೆ.
ಓರ್ವ ಅಭ್ಯರ್ಥಿ ಚುನಾವಣಾ ಆಯೋಗ ತನಗೆ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಪಕ್ಷೇತರ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿಯ ಚಿಹ್ನೆ, ಇತರ ನೋಂದಣಿಗಳನ್ನು ಉಪಯೋಗಿಸುತ್ತಿರುವುದು ನೀತಿ ಸಂಹಿತೆ ಉಲ್ಲಂಘನೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.