ಪುತ್ತೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪೂಂಜಾ ಹೇಳಿಕೆ ವಿರುದ್ಧ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಮೇ 22ರಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಯ ವಿಜಯೋತ್ಸವ ಸಂದರ್ಭ ಹತ್ಯೆ ಕುರಿತು ಹೇಳಿಕೆ ನೀಡಿದ್ದು, ವಿಡಿಯೋ ಚಿತ್ರಣ ಇದ್ದು, ಮುಖ್ಯಮಂತ್ರಿಗಳ ವಿರುದ್ಧ ಮಾಡಿರುವ ಆರೋಪ ಕುರಿತು ತನಿಖೆ ನಡೆಸುವಂತೆ ದೂರಿನಲ್ಲಿ ವಿವರಿಸಿದ್ದಾರೆ.