Categories: ಮಂಗಳೂರು

ಪುತ್ತೂರು ತಾಲೂಕು ಆಡಳಿತದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಪುತ್ತೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.೧೫ರಂದು ಪುತ್ತೂರು ತಾಲೂಕು ಆಡಳಿತದ ವತಿಯಿಂದ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಹಾಯಕ ಆಯುಕ್ತ ಗಿರೀಶ್ ನಂದನ್‌ರವರು ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿದರು.

ಬಳಿಕ ಮಾತನಾಡಿದ ಅವರು, ಭಾರತದ ಸಂವಿಧಾನ ವಿಶ್ವದ ಅತೀ ದೊಡ್ಡ ಹಾಗೂ ಪ್ರಾಮುಖ್ಯತೆ ಪಡೆದ ಸಂವಿಧಾನವಾಗಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ. ಮೂಲಭೂತ ಹಕ್ಕುಗಳು ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಸಂವಿಧಾನ ದಿನಾಚರಣೆಯ ಮೂಲಕ ಯುವ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ಸಂವಿಧಾನದಲ್ಲಿ ಸೂಚಿಸಿದ ಮೂಲಭೂತವಾಗಿರುವ ಕರ್ತವ್ಯಗಳನ್ನು ನಿಭಾಯಿಸಿದಾಗ ಹಕ್ಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ನಮ್ಮ ಹಕ್ಕುಗಳಿಗೆ ತೊಂದರೆ ಆದಾಗ ಸಂವಿಧಾನಾತ್ಮಕವಾಗಿ ಪಡೆಯಬಹುದಾಗಿ ಎಂದರು.

ತಹಶೀಲ್ದಾರ್ ಜೆ. ಶಿವಶಂಕರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ashika S

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

38 seconds ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

56 seconds ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

25 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

27 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

47 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

59 mins ago