ಮಂಗಳೂರು: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ಧಗೆ ಹೆಚ್ಚುತ್ತಿರುವಂತೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ 5 ದಿನ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.
ಮಾ.14 ರಿಂದ 18ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.