News Karnataka Kannada
Saturday, May 11 2024
ಮಂಗಳೂರು

ರಾಷ್ಟ್ರೀಯ ಲೋಕ್ ಅದಾಲತ್: 14,414 ಪ್ರಕರಣಗಳು ಇತ್ಯರ್ಥ

Rashtriya Lok Adalat: 14,414 cases disposed of
Photo Credit : News Kannada

ಮಂಗಳೂರು, ಫೆ.11: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಫೆ.11ರ ಶನಿವಾರ ‘ರಾಷ್ಟ್ರೀಯ ಲೋಕ್ ಅದಾಲತ್’ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ನಡೆಯಿತು.

ಒಟ್ಟು 47 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 21,018 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 14,414 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 24,07,34,762 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.

ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು