News Karnataka Kannada
Sunday, May 12 2024
ಮಂಗಳೂರು

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ

ಪುತ್ತಿಲ ಪರಿವಾರ ದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರ ಕುರಿತು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
Photo Credit : News Kannada

ಮಂಗಳೂರು:  ಪುತ್ತಿಲ ಪರಿವಾರ ದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರ ಕುರಿತಂತೆ,   ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ,

“ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಅವರ ಮನವೊಲಿಕೆಗೆ ಪಾರ್ಟಿ ಪ್ರಯತ್ನ ಮಾಡಿದೆ. ಭಾಜಪಾ ಬಹಳ ವರ್ಷಗಳ ಹೋರಾಟದಿಂದ ಅತೀ ದೊಡ್ಡ ಪಾರ್ಟಿಯಾಗಿ ಬೆಳೆದಿದೆ  ಅಲ್ಲದೆ  ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನ್ನು ಎದುರಿಸಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ . ಪಕ್ಷಕ್ಕೆ ಎದಯರಾಳಿಯ ಪ್ರಶ್ನೆ ಇಲ್ಲ, ಇದು ಪ್ರಜಾಪ್ರಭುತ್ವ ಚುನಾವಣಾ ಆದ್ದರಿಂದ  ನಿಲ್ಲುವ ಹಕ್ಕು ಎಲ್ಲರಿಗೂ ಇದೆ.
ಪ್ರತೀ ಚುನಾವಣೆಗೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತದೆ ಆ ಎಲ್ಲಾ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ. ರಾಮಮಂದಿರ ನಿರ್ಮಾಣದ ವಾದ ಬಳಿಕ ಬಿಜೆಪಿ ಪರವಾದ ವಾತವರಣ ಅದ್ಭುತ ವಾಗಿದೆ.ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ.

ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ ಆಗಿನ ಸಮಸ್ಯೆ ಬೇರೆ ಈಗಿನ ವಿಚಾರ ಬೇರೆ, ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ ಸೀಟು ಕೊಡೋದು ಬಿಡೋದು ರಾಷ್ಟ್ರೀಯ ನಾಯಕರ ತೀರ್ಮಾನ ಆ ತೀರ್ಮಾನಕ್ಕೆ ಕಾರ್ಯಕರ್ತನಾಗಿ ಬದ್ಧನಾಗಿದ್ದೇನೆ ಎಂದು   ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು