News Karnataka Kannada
Thursday, May 02 2024
ಮಂಗಳೂರು

ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದ ಡಿಯೋ ಸವಾರ

ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
Photo Credit : News Kannada

ಪುತ್ತೂರು: ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.

ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದು ಬಂದಿಲ್ಲ.

ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು