Categories: ಮಂಗಳೂರು

ಏ. 14ರಂದು ಮಂಗಳೂರಿಗೆ ಪ್ರಧಾನಿ : ಮೋದಿ ರೋಡ್ ಶೋ ನ ರೂಟ್ ಮ್ಯಾಪ್ ಸಿದ್ದ

ಮಂಗಳೂರು: ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮೋದಿ‌ ಭದ್ರತೆಯ ಹೊಣೆಯನ್ನು ಎಸ್ ಪಿ ಜಿ ಅಧಿಕಾರಿಗಳು ವಹಿಸಿಕೊಂಡಿದ್ದಾರೆ. ಹೀಗಾಗಿ ಈಗಾಗಲೇ ಸ್ಥಳ ಪರಿಶೀಲನೆ ಕೂಡ ನಡೆಯುತ್ತಿದೆ.

ಮೋದಿ ರೋಡ್ ಶೋನ ರೂಟ್ ಮ್ಯಾಪ್ ಸಿದ್ದವಾಗಿದ್ದು, ಪ್ರಧಾನಿ ಮೋದಿ ಯವರ ತೆರಳಲಿರುವ ರಸ್ತೆಯುದ್ದಕ್ಕೂ ಪರಿಶೀಲನೆ ನಡೆಸಿದ ಎಸ್ ಪಿ ಜಿ ಹಾಗು ಐ ಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.

ಏ. 14ರ ಸಂಜೆ 6 ಗಂಟೆಗೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭವಾಗಲಿದೆ. ಸಂಜೆ 6 ಗಂಟೆ ಸುಮಾರಿಗೆ ಲೇಡಿಹಿಲ್ ನಾರಾಯಣ ಗುರು ಸರ್ಕಲ್ ಬಳಿ ಮೋದಿ ಆಗಮನವಾಗಲಿದೆ. ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಬಳಿಕ ರೋಡ್ ಶೋ ಅರಂಭವಾಗಲಿದೆ.

ಬಳಿಕ ಲಾಲ್ ಭಾಗ್ ನ ಮಂಗಳೂರು ಪಾಲಿಕೆ ಕಚೇರಿ ಎದುರು ರೋಡ್ ಶೋ ತಲುಪಲಿದೆ. ಆ ಬಳಿಕ ಬಳ್ಳಾಲ್ ಭಾಗ್ ದಾಟಿ ಎಂ.ಜಿ ರಸ್ತೆಯಲ್ಲಿ ಸಾಗಲಿರೋ ರೋಡ್ ಶೋ ಸಾಗಲಿದೆ.ಅಲ್ಲಿಂದ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿದೆ. ಬಳಿಕ ಕೆ.ಎಸ್.ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯವಾಗಲಿದೆ. ಸುಮಾರು 2.5 ಕಿ.ಮೀ ಸಾಗಲಿರೋ ಪ್ರಧಾನಿ‌ ನರೇಂದ್ರ ಮೋದಿ ರೋಡ್ ಶೋ ನಡೆಯಲಿದ್ದು, ಮೋದಿ‌ ರೋಡ್ ಶೋ‌ ನಡೆಸುವ ರಸ್ತೆಯುದ್ದಕ್ಕೂ ಎಸ್ ಪಿ ಜಿ ಅಧಿಕಾರಿಗಳ ಕುಲಂಕುಶ ಪರಿಶೀಲನೆ ನಡೆಯಲಿದೆ.

Nisarga K

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

24 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

41 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

59 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

2 hours ago