News Karnataka Kannada
Saturday, April 27 2024
ಮಂಗಳೂರು

ನೆಕ್ಕರೆಮಾರ್ ನಲ್ಲಿ 1.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Rs 1.85 crore in Nekkaremar. Bhoomipujan for various development works at a cost
Photo Credit : News Kannada

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.85 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ತಡೆಯಿಲ್ಲದೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಅನೇಕ ಯೋಜನೆಗಳು ಮಂಗಳೂರು ನಗರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ನೆಕ್ಕರೆಮಾರ್ ಪರಿಸರದಲ್ಲಿ ರಾಜಕಾಲುವೆ ಅಭಿವೃದ್ಧಿ, ರಸ್ತೆ ನಿರ್ಮಾಣ ಹಾಗೂ ಚರಂಡಿ ಅಭಿವೃದ್ಧಿಗೆ 1.85 ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದು, ಈ ಭಾಗದ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದಲ್ಲಿ ಮಳೆಗಾಲದಲ್ಲಿ ಉಂಟಾಗುವ ಕೃತಕ ನೆರೆ ಬಾಧೆಯನ್ನು ತಪ್ಪಿಸಲು ಸಮಗ್ರವಾಗಿ ಚಿಂತನೆ ನಡೆಸಲಾಗಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ , ಭರತ್ ರಾಜ್ ಶೆಟ್ಟಿ, ಸುಕೇಶ್, ಸುಜಾತ, ರಾಜೇಶ್ ಎಕ್ಕೂರ್, ರಾಮ್ ಪ್ರಸಾದ್, ಚೇತನ್ ನೆಕ್ಕರೆಮಾರ್, ಜಯಂತಿ, ಚಂದ್ರಶೇಖರ್ ಗಂಗಾಧರ್ ಕೋಟ್ಯಾನ್, ಧನಂಜಯ್, ಮೋಹನ್ ದೇವಾಡಿಗ, ವಸಂತ ನವೀನ್ ದಿನೇಶ್ ಗುನರಾಜ್ ಶಿವರಾಮ್ ಮನಿಯಾನಿ, ಗಣೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು