Categories: ಮಂಗಳೂರು

ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ- ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ 10.00 ಕೋಟಿ ರೂಪಾಯಿಗಳ ಅನುದಾನದ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಈ ಮಟ್ಟದ ಅಪಾರ ಪ್ರಮಾಣದಲ್ಲಿ ಅನುದಾನವನ್ನು ಮಂಜೂರಾತಿಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ, ಧಾರ್ಮಿಕ ದತ್ತಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆಯವರಿಗೆ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್‍ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚುವ ಸುನಿಲ್ ಕುಮಾರ್‍ರವರಿಗೆ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಅಭಿನಂದಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಇರುವ 28 ದೇವಾಲಯಗಳಿಗೆ ಸರಕಾರದ ಈ ಯೋಜನೆಯಿಂದ ಮೂಲಭೂತ ಸೌಕರ್ಯ ವೃದ್ಧಿಸಲು ನೆರವಾಗಲಿದೆ.

ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ, ಕೊರಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು, ಶ್ರೀ ಗೋಪಾಕೃಷ್ಣ ದೇವಸ್ಥಾನ ನಾವೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಕಲ್ಮಂಜ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಹೊಸಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಹತ್ಯಡ್ಕ ಇದರ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.50.00 ಲಕ್ಷ ಹಾಗೂ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ, ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು, ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬಂದಾರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯ, ಶ್ರೀ ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ, ಶ್ರೀ ಮಹಾಗಣಪತಿ ದೇವಸ್ಥಾನ ಬಡಗಕಾರಂದೂರು, ಪೆರ್ಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಜಿರೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೊಯ್ಯೂರು, ಸನ್ಯಾಸಿಕಟ್ಟೆ ಶ್ರೀ ಪರುಶುರಾಮ ದೇವಸ್ಥಾನ ಮುಂಡಾಜೆ, ಕುರಾಯ ಶ್ರೀ ಸದಾಶಿವೇಶ್ವರ ದೇವಸ್ಥಾನ ಬಂದಾರು, ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬಂದಾರು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳದಪೇಟೆ ಕಾಶಿಪಟ್ನ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮರೋಡಿ, ಶ್ರೀ ಸದಾಶಿವ ದೇವಸ್ಥಾನ ಕಳೆಂಜ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮೂಡುಕೋಡಿ ಇವುಗಳ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.25.00 ಲಕ್ಷ ಅನುದಾನ ಮಂಜೂರಾತಿಗೊಂಡಿದೆ ಎಂದು ಶಾಸಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago