News Karnataka Kannada
Wednesday, May 01 2024
ಮಂಗಳೂರು

5 ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ. ಅನುದಾನ: ವೇದವ್ಯಾಸ ಕಾಮತ್

Rs 4,500 crore has been allocated to the sector in 5 years. Grant: Vedavyas Kamath
Photo Credit : News Kannada

ಮಂಗಳೂರು: ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ ‘ಅಭಿವೃದ್ಧಿ ಪಥʼ ಪುಸ್ತಕ ಬಿಡುಗಡೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ತನ್ನ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಪರಿವರ್ತನೆಯ ರೀತಿಯಲ್ಲಿ ಕಾರ್ಯ ನಡೆಸಿರುವುದಾಗಿ ಹೇಳಿದ ಅವರು, ನಗರಕ್ಕೆ ಅತೀ ಮುಖ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 40 ಕ್ಕೂ ಅಧಿಕ ಓವರ್ ಹೆಡ್ ಟ್ಯಾಂಕ್‌ಗಳ ನಿರ್ಮಾಣದೊಂದಿಗೆ 792 ಕೋಟಿ ರೂ.ಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಒಳಚರಂಡಿ ಸಮಸ್ಯೆ ಬಗೆಹರಿಸಲು 300 ಕೋಟಿರೂ.ಗಳ ಕುಡ್ಸೆಂಪ್ ಯೋಜನೆ ಜಾರಿಯಲ್ಲಿದ್ದು, ಸ್ಮಾರ್ಟ್ ಸಿಟಿಯಡಿ ಹಲವಾರು ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ ನಗರದಲ್ಲಿದ್ದ 70000 ಕ್ಕೂ ಅಧಿಕ ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಹೊರಹೋಗಿದ್ದು, ವಾಪಾಸದವರ ಸಂಖ್ಯೆ ಕಡಿಮೆ ಆಗಿರುವ ಕಾರಣ ಕಾಮಗಾರಿ ವೇಗ ಸ್ವಲ್ಪ ಕುಂಠಿತ ಆಗಿತ್ತು. ಎರಡು ವರ್ಷಗಳಲ್ಲಿ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಲಿದೆ. ಮೂಡಾ ತೆರಿಗೆ ಸರಳೀಕರಣಗೊಳಿಸಲಾಗಿದ್ದು, ನೆರೆ ಹಾವಳಿ ತಡೆಗೆ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣಕ್ಕಾಗಿ 1500 ಕೋಟಿ ರೂ. ಅಗತ್ಯವೆಂದು ಹೇಳಲಾಗಿದ್ದು, ಈಗಾಗಲೇ 125 ಕೋಟಿರೂ.ಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಕ್ಷೇತ್ರದ ಮೂರು ಸರಕಾರಿ ಪದವಿ ಕಾಲೇಜುಗಳು ನ್ಯಾಕ್‌ನಿಂದ ‘ಎ’ ಗ್ರೇಡ್ ಪಡೆದಿದ್ದು, ಕ್ಷೇತ್ರವೊಂದರಲ್ಲಿ ಇಂತಹ ಸಾಧನೆ ಇದು ರಾಜ್ಯದಲ್ಲೇ ಪ್ರಥಮ ಎಂದು ವೇದವ್ಯಾಸ ಕಾಮತ್ ಹೇಳಿದರು.

ಅಭಿವೃದ್ಧಿ ಪಥ ಬಿಡುಗಡೆಯನ್ನು ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಗೋಷ್ಟಿಯಲ್ಲಿ ಮೂಡ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು, ಮಾಜಿ ಮೇಯರ್ ದಿವಾಕರ್, ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ರೂಪಾ ಡಿ. ಬಂಗೇರ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮನಪಾ ಮಾಜಿ ಸದಸ್ಯ ವಿಜಯ ಕುಮಾರ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಸುರೇಂದ್ರ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು