Categories: ಮಂಗಳೂರು

ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಸಂಜಯ್ ವರ್ಮಾ ಅಧಿಕಾರ ಸ್ವೀಕಾರ

ಮಂಗಳೂರು: ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿ ( ಅಡಿಶನಲ್‌ ಚಾರ್ಜ್‌) ಸಂಜಯ್ ವರ್ಮಾ ಜೂನ್‌ 1ರಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ವರ್ಮ ಅವರು ತೈಲ ಮತ್ತು ಅನಿಲ ಉದ್ಯಮ ಕ್ಷೇತ್ರದಲ್ಲಿ ವಿಶೇಷ ಪರಿಣಿತಿ ಪಡೆದಿದ್ದು, ಮೂರುವರೆ ದಶಕಗಳಿಂದ ಆಪರೇಷನ್ ಮ್ಯಾನೇಜ್ಮೆಂಟ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್, ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ ಮತ್ತು ಆರೋಗ್ಯ, ಸುರಕ್ಷತೆ ಮತ್ತು ಪರಿಸರ ನಿರ್ವಹಣೆಯಲ್ಲಿ ಸಂಸ್ಥೆಯ ಮುಖ್ಯಸ್ಥರಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದಾರೆ.

ವರ್ಮ ಅವರು ಜೂನ್ 2020 ರಿಂದ ಎಂಆರ್‌ಪಿಲ್‌ ನಿರ್ದೇಶಕರಾಗಿ ರಿಫೈನರಿ ಮಂಡಳಿಯಲ್ಲಿದ್ದಾರೆ. ಅವರು ಎಂಎಸ್‌ಟಿಪಿಎಲ್‌, ಒಎನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಮತ್ತು ಶೆಲ್- ಎಂಆರ್‌ಪಿಎಲ್‌ ಏವಿಯೇಷನ್‌ನ ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದಾರೆ.

ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾದ ಸಂಜಯ್ ವರ್ಮಾ ಅವರು ಡಿಸೆಂಬರ್ 1993 ರಲ್ಲಿ ಎಂಆರ್‌ಪಿಎಲ್‌ ಸೇರಿದರು ಮತ್ತು ರಿಫೈನರಿ ಮತ್ತು ಅದರ ಆರೊಮ್ಯಾಟಿಕ್ ಕಾಂಪ್ಲೆಕ್ಸ್‌ನ ಎಲ್ಲಾ ಮೂರು ಪ್ರಮುಖ ಹಂತಗಳ ಕಾರ್ಯಗತಗೊಳಿಸುವಿಕೆ ಮತ್ತು ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವನ್ನು ಅವರು ವಹಿಸಿದ್ದರು.

ಎಂಆರ್‌ಪಿಎಲ್‌ ಸಂಸ್ಥೆಯ ಕಾರ್ಯಕ್ಷಮತೆ, ಗೌರವ, ಹೆಚ್ಚಿಸುವಲ್ಲಿ ಅವರ ಪಾತ್ರ ಅಪಾರವಾಗಿದೆ. ಅವರ ಶ್ರಮದಿಂದಾಗಿ 2022-23 ನೇ ಸಾಲಿನಲ್ಲಿ ಎಂಆರ್‌ಪಿಎಲ್‌ ಸಂಸ್ಥೆ ರಾಷ್ಟ್ರದ ಏಕೈಕ ಸಾರ್ವಜನಿಕ ರಂಗದ ಅತ್ಯುತ್ತಮ ತೈಲೋತ್ಪನ್ನ ಸಂಸ್ಥೆಯಾಗಿ ಮೂಡಿಬರಲು ಸಾಧ್ಯವಾಯಿತು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago