Categories: ಮಂಗಳೂರು

ನರಿಕೊಂಬು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರವೇಶ ಕಾರ್ಯಕ್ರಮ

ಬಂಟ್ವಾಳ: ನರಿಕೊಂಬು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರಗಿತು.

ಕಾರ್ಯಕ್ರಮದಲ್ಲಿ ಊರಿನ ಶಾಲಾ ಅಭಿಮಾನಿಗಳು ಪೋಷಕರು ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ತಾಯಂದಿರ ಸಮಿತಿ ಅಧ್ಯಕ್ಷರು ಸದಸ್ಯರು ಮುಖ್ಯೋಪಾಧ್ಯಾಯರು ಶಾಲಾ ಶಿಕ್ಷಕರು ವಿದ್ಯಾರ್ಥಿ ಸಮೂಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆರಂಭದಲ್ಲಿ ಚಿಣ್ಣರ ಲೋಕ ಸೇವಾ ಟ್ರಸ್ಟ್ ಸಂಚಾಲಕ ಮೋಹನದಾಸ್ ಕೊಟ್ಟಾರಿ ಇವರ ಸಹಕಾರದಲ್ಲಿ ಚೆಂಡೆ ಮೇಳ,, ಬೊಂಬೆ ಕುಣಿತ ಶಾಲಾ ಬ್ಯಾಂಡ್ ತಂಡದೊಂದಿಗೆ ಮೆರವಣಿಗೆಯಲ್ಲಿ ಮಕ್ಕಳ ಸ್ವಾಗತ ಕಾರ್ಯಕ್ರಮ ನಡೆಯಿತು.‌

ಬಳಿಕ ನಡೆದ ಸೌಅ ಕಾರ್ಯಕ್ರಮದಲ್ಲಿ ದಾನಿಗಳಾದ ರಾಜೇಶ್ , ಲೋಕೇಶ್, ಶ್ರೀನಿವಾಸ ಪೂಜಾರಿ, ಶ್ರೀಮತಿ ಯಶೋಧ , ಸಂದೇಶ್ ಹಾಗೂ ಮಿಥುನ್ ಕೊಡುಗೆಯಾಗಿ ನೀಡಿದ ಕೊಡೆ , ಪೆನ್ಸಿಲ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ನಡೆಯುವ ವಾರ್ಷಿಕ ಕ್ರಿಯಾ ಯೋಜನೆ ಯ ಹಾಗೂ ಗುಣಾತ್ಮಕ ಶಿಕ್ಷಣ ನೀಡಲು ಶಾಲೆಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮುಖ್ಯೋಪಾಧ್ಯಾಯಿನಿ ಪ್ರೇಮಾ ಮಕ್ಕಳ ಪೋಷಕರಿಗೆ ಮನದಟ್ಟು ಮಾಡಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರವಿ ಅಂಚನ್ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಉಷಾಲಾಕ್ಷಿ ಹಾಗೂ ಸದಸ್ಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

ಶಿಕ್ಷಕಿ ಶೋಭ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಜಾತ ಸ್ವಾಗತ ಗೈದು ಶ್ರೀಮತಿ ವಿಲ್ಮಾ ವಂದಿಸಿದರು. ಹಿರಿಯ ವಿದ್ಯಾರ್ಥಿ ನರೇಂದ್ರ ರ ನೇತೃತ್ವದಲ್ಲಿ ಶಾಲೆಯನ್ನು ಅಲಂಕರಿಸಲಾಗಿತ್ತು.

Ashika S

Recent Posts

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

9 mins ago

ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್‌ಗೆ ಟ್ವಿಸ್ಟ್‌ : ಸಂತ್ರಸ್ತೆಯಿಂದ ದೂರು ದಾಖಲು

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ದೂರು ದಾಖಲಾಗಿದೆ. ನೊಂದ ಸಂತ್ರಸ್ತೆ…

15 mins ago

ಐಪಿಎಲ್​ ಬೆಟ್ಟಿಂಗ್​ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್​ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

32 mins ago

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ…

2 hours ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ…

2 hours ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

2 hours ago