ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜು.11ರಂದು ಸೋಮವಾರವೂ ಅಂಗನವಾಡಿ ಕೇಂದ್ರ, ಎಲ್ಲ ಖಾಸಗಿ, ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾಲೇಜುಗಳಿಗೆ ರಜೆ ಇಲ್ಲ. ಪದವಿಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಇತರ ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರದಿಂದ ತರಗತಿಗಳು ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.