Categories: ಮಂಗಳೂರು

ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೇಟ್‌: ನೆಟ್ಟಾರು ಪೋಷಕರ ಆಕ್ರೋಶ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಎಂದು ಎಸ್‌ಡಿಪಿಐ ಘೋಷಿಸಿರುವುದಕ್ಕೆ, ಪ್ರವೀಣ್‌ ನೆಟ್ಟಾರು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಶಾಫಿ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯಾಗಿದ್ದು, ಜೈಲಿನಲ್ಲಿದ್ದಾನೆ. ಆದರೆ ಆತನನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಎಸ್‌ಡಿಪಿಐ ಘೋಷಿಸಿದೆ. ಯಾವುದೇ ಕಾರಣಕ್ಕೂ ಶಾಫಿ ಬೆಳ್ಳಾರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ್‌ ನೆಟ್ಟಾರು ಅವರ ಪೋಷಕರು ಒತ್ತಾಯಿಸಿದ್ದಾರೆ. ಅನ್ಯಾಯವಾಗಿ ನಮ್ಮ ಮಗನನ್ನು ಶಾಫಿ ಹತ್ಯೆ ಮಾಡಿದ್ದಾನೆ. ಅಧಿಕಾರ ಪಡೆದರೆ ಮತ್ತಷ್ಟು ಮಂದಿಯನ್ನು ಕೊಲ್ಲಬಹುದು. ನಮಗೆ ಮನೆಯಿಂದ ಹೊರಗೆ ಹೋಗಲಾರದ ಸ್ಥಿತಿ ಬರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಫಿ ಬೆಳ್ಳಾರೆ 2022ರ ಜುಲೈ 26 ರಂದು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿದ್ದಾನೆ. ಈ ಕೊಲೆಯಲ್ಲಿ ಶಾಮೀಲಾಗಿರುವ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿತ್ತು. ಈಗ ಶಾಫಿ ಜೈಲಿನಲ್ಲಿದ್ದಾನೆ.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

13 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

24 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

31 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

34 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

45 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

54 mins ago