News Karnataka Kannada
Thursday, May 02 2024
ಮಂಗಳೂರು

ಮಕ್ಕಳೆ ಟಾರ್ಗೆಟ್ : ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ

drug chocolate
Photo Credit : News Kannada

ಮಂಗಳೂರು: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹೈಲ್ಯಾಂಡ್​​​​ ಬಳಿಯ ಅಂಗಡಿಯಲ್ಲಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45), ಹಾಗೂ ಮಂಗಳೂರಿನ ಮನೋಹರ್ ಶೇಟ್(49) ಎಂಬಿಬ್ಬರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಇನ್ನು ಆರೋಪಿಯಾದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್ ತನ್ನ ಗೂಡಂಗಡಿಯಲ್ಲಿ 5,500 ಮೌಲ್ಯದ ‘ಮಹಾಶಕ್ತಿ ಮುನಕ್ಕಾ’, ‘ಬಮ್ ಬಮ್ ಮುನಕ್ಕಾ ವಟಿ’, ‘ಪಾವರ್ ಮುನಕ್ಕಾ ವಟಿ’ ಹಾಗೂ ‘ಆನಂದ ಚೂರ್ಣ’ ಎಂದು ನಮೂದು ಇರುವ ಚಾಕೊಲೇಟ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ. ಇತ್ತ ನಗರದ ಕಾರ್ ಸ್ಟ್ರೀಟ್ ಬಳಿ ಉತ್ತರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಬಾಂಗ್ ಮಿಶ್ರಿತ ಚಾಕೋಲೇಟ್​ನ್ನು ಮಾರಾಟ ಮಾಡುತ್ತಿದ್ದ ಆರೋಪಿ ಮನೋಹರ್ ಶೇಟ್ ಸಹಿತ, ಮೂರು ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ಇಟ್ಟಿದ್ದ ಸುಮಾರು 48,000 ಮೌಲ್ಯದ ಚಾಕೋಲೇಟ್​ನ್ನ ವಶಕ್ಕೆ ಪಡೆದು, ಚಾಕೊಲೇಟ್​ಗಳನ್ನು ಲ್ಯಾಬ್​ಗೆ ಕಳುಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು