Categories: ಮಂಗಳೂರು

ಶಿರಾಡಿ ಘಾಟ್ : ಮತ್ತೆ ಭೂಕುಸಿತ, ವಾಹನ ಸಂಚಾರ ಸಂಪೂರ್ಣ ಬಂದ್

ಶಿರಾಡಿ ಘಾಟ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಮತ್ತೆ ಕುಸಿದಿದ್ದು, ಸಂಚಾರಕ್ಕೆ ತೊಡಕಾಗಿದೆ. ದೋಣಿಗಲ್ ನಲ್ಲಿ ಶುಕ್ರವಾರ ಮಧ್ಯಾಹ್ನ ರಸ್ತೆ ಕುಸಿದಿದ್ದು, ಬಿಸಲೆ ಘಾಟಿಗೆ ಹೋಗುವಂತಹ ರಸ್ತೆಯ ಪಕ್ಕದಲ್ಲಿದ್ದಂತಹ ಮಣ್ಣು ಕುಸಿದು ರಸ್ತೆ ಮೇಲೆ ಬಂದಿದೆ.

ಹಾಗಾಗಿ ಆ ಭಾಗದಲ್ಲಿ ಓಡಾಡುವಂತಹ ವಾಹನಗಳನ್ನ ಹಾಸನದ ಎಸ್ ಪಿ ಅವರು ತಡೆದಿದ್ದು, ಈಗ ಕುಸಿತಕ್ಕೊಳಗಾದ ಭಾಗದಲ್ಲಿ ಸ್ಯಾಂಡ್ ಬ್ಯಾಗ್ ಹಾಕಿ ಮಣ್ಣು ಜರಿಯುವುದನ್ನು ತಡೆಯುವ ಯತ್ನ ಮಾಡಲಾಗುತ್ತಿದೆ. ಇದೀಗ ಘಾಟ್ ನಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ಇದರ ಪರಿಣಾಮ ಮಂಗಳೂರಿಗೆ ಹೋಗುವ ಎಲ್ಲಾ ವಾಹನಗಳು ಬೇಲೂರು ಮೂಡಿಗೆರೆ ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ಚಲಿಸಬೇಕು ಎಂದು ಹಾಸನ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, ಹಾಸನ ಮಾರ್ಗವಾಗಿ ಬೆಂಗಳೂರು ಸಂಚಾರ ಮಾಡುವುದಕ್ಕೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

Sneha Gowda

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

3 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

16 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

32 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

53 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago