Categories: ಮಂಗಳೂರು

ಶಿವರಾತ್ರಿ ಜಾಗರಣೆ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣ

ಬೆಳ್ತಂಗಡಿ: ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆ ಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿ ಎಲ್ಲರೂ ಶ್ರದ್ಧಾ ಭಕ್ತಿಯಿಂದ ದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆ ಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶನಿವಾರ ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಮನೆಯಲ್ಲಿ ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಧರ್ಮಸ್ಥಳದಲ್ಲಿ ಪ್ರತಿವರ್ಷ ಭಜನಾ ತರಬೇತಿ ಕಮ್ಮಟ ಆಯೋಜಿಸುತ್ತಿದ್ದು ಇದರಿಂದಾಗಿ ಊರಿನ ಭಜನಾ ಮಂದಿರಗಳು ಶ್ರದ್ಧಾ – ಭಕ್ತಿಯ ಧಾರ್ಮಿಕ ಚಟುವಟಿಕೆಗಳ ಕೇಂದ್ರಗಳಾಗಿ ಬೆಳೆಯುತ್ತಿವೆ, ಬೆಳಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಸಂಸ್ಕಾರ ಮೂಡಿಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ನಿತ್ಯವೂ ಮನೆಯಲ್ಲಿ ಮನೆ ದೇವರನ್ನು, ಇಷ್ಟ ದೇವರನ್ನು ಪ್ರಾರ್ಥಿಸಿದ ಬಳಿಕ ವರ್ಷಕ್ಕೊಮ್ಮೆ ವಿಶೇಷ ಸಾನ್ನಿಧ್ಯ ಇರುವ ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ, ಉಡುಪಿ ಮೊದಲಾದ ಕ್ಷೇತ್ರಗಳಿಗೆ ಹೋಗಿ ಶ್ರದ್ಧಾ-ಭಕ್ತಿಯಿಂದ ಸೇವೆ ಸಲ್ಲಿಸಬಹುದು ಎಂದು ಅವರು ಸಲಹೆ ನೀಡಿದರು.

ಬೆಂಗಳೂರು, ಮೈಸೂರು, ಹಾಸನ, ಮಂಡ್ಯ ಮೊದಲಾದ ಅನೇಕ ಊರುಗಳಿಂದ ಪ್ರತಿವರ್ಷ ಸಾವಿರಾರು ಮಂದಿ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬರುತ್ತಾರೆ. ದೇಹದ ಪಾವಿತ್ರ್ಯತೆ ಕಾಪಾಡಲು ಶಿಸ್ತಿನಿಂದ ಅವರು ಸ್ವಚ್ಛತೆಗೆ ಆದ್ಯತೆ ನೀಡಿ ಪರಿಶುದ್ಧ ಮನ-ವಚನ-ಕಾಯದಿಂದ ಪಾದಯಾತ್ರೆ ಮಾಡಿ ತಮ್ಮ ಕಷ್ಟಗಳನ್ನೆಲ್ಲ ಪರಿಹರಿಸಿಕೊಳ್ಳುತ್ತಾರೆ. ಇಲ್ಲಿ ಬಂದ ಮೇಲೆ ಅವರಿಗೆ ಮಾನಸಿಕ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.

ಪಾದಯಾತ್ರಿಗಳ ಪರವಾಗಿ ಬೆಂಗಳೂರಿನ ರಮೇಶ್ ಮಾತನಾಡಿ ಪಾದಯಾತ್ರೆಯಿಂದ ತನಗೆ ವಿಶೇಷ ಶಾಂತಿ, ನೆಮ್ಮದಿ ದೊರಕಿದೆ ಎಂದು ಹೇಳಿದರು.

ಅಹೋರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು.
ದೇವಸ್ಥಾನ ಆವರಣದಲ್ಲಿ ಅಹೋರಾತ್ರಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನ ಮಾಡಿದರು.

ಶಿವರಾತ್ರಿಯಿಂದ ಲೋಕಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.

 

Sneha Gowda

Recent Posts

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

21 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

34 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

44 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago