News Karnataka Kannada
Tuesday, April 16 2024
Cricket
ಮಂಗಳೂರು

ಕರಾವಳಿಯಾದ್ಯಂತ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಣೆ

Shivarthri
Photo Credit : News Kannada

ಮಂಗಳೂರು: ಕರಾವಳಿಯಾದ್ಯಂತ ಮಹಾಶಿವರಾತ್ರಿಯನ್ನು ಇಂದು(ಮಾ.8) ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ.

ಜಿಲ್ಲೆಯ ವಿವಿಧ ಶಿವ ದೇವಸ್ಥಾನಗಳಲ್ಲಿ ಇಂದು ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿತ್ತು. ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗಿನಿಂದಲೇ ಶಿವನಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅರ್ಚನೆಗಳು ನಡೆಯುತ್ತಿದೆ.

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಕುಡುಪು ಶ್ರೀ ಅನಂತ ಪದ್ಮನಾಭ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆಗಳು ಭಜನೆ, ಜಾಗರಣೆ ನಡೆಯುತ್ತಿದೆ.

ಇನ್ನು ದೇವರ ದರ್ಶನಕ್ಕಾಗಿ ವಿವಿಧೆಡೆಗಳಲ್ಲಿ ಕಾಲ್ನಡಿಗೆಯಲ್ಲೇ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು