Categories: ಮಂಗಳೂರು

ಮದುವೆಯಾದ ಆರು ತಿಂಗಳಲ್ಲೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ತಲಾಖ್‌ ನೀಡಿ ಹೊರದಬ್ಬಿದ ಪತಿ

ಮಂಗಳೂರು: ಮದುವೆಯಾದ ಕೇವಲ ಆರು ತಿಂಗಳಲ್ಲೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ತಲಾಖ್ ನೀಡಿದ ಅಮಾನವೀಯ ಘಟನೆ ಮಂಗಳೂರಿನ ಮಾರ್ನಮಿಕಟ್ಟೆ ಎಂಬಲ್ಲಿ ನಡೆದಿದೆ.

ಹಣ್ಣು ತರಕಾರಿ ವ್ಯಾಪಾರಿಯಾಗಿರುವ ಮಾರ್ನಮಿಕಟ್ಟೆಯ ಮಹಮ್ಮದ್ ಹುಸೇನ್ ಎಂಬಾತ ಕಳೆದ ಆರು ತಿಂಗಳ ಹಿಂದೆ ಶಬಾನಾ ಎಂಬವರನ್ನು ಎರಡನೇ ಮದುವೆಯಾಗಿದ್ದ. ಮದುವೆಯಾದ 8 ದಿನದಲ್ಲಿ ಪತ್ನಿಯಿಂದ ಹಣ ಒಡವೆ ಸೇರಿ 10 ಲಕ್ಷ ರೂಪಾಯಿ ಹುಸೇನ್ ಪೀಕಿಸಿ ಇದೀಗ ಮಾರಣಾಂತಿಕ ಹಲ್ಲೆ ನಡೆಸಿ ತಲಾಖ್ ತಲಾಖ್ ತಲಾಖ್ ಎಂದು ಶಬಾನಾ ಅವರನ್ನು ಮನೆಯಿಂದ ಹೊರದಬ್ಬಿದ ಅಮಾನವೀಯ ಘಟನೆ ನಡೆದಿದೆ. ಪತಿಯ ಅನ್ಯಾಯದ ವಿರುದ್ಧ ಪತ್ನಿ ಇದೀಗ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶಬಾನಾ ಅವರಿಗೆ ಈ ಹಿಂದೆ ಒಂದು ಮದುವೆಯಾಗಿ ಅದರಲ್ಲಿ ಎರಡು ಮಕ್ಕಳಿವೆ. ಹುಸೇನ್‌ ಅವರನ್ನು ಮದುವೆಯಾದ ಬಳಿಕ ಗರ್ಭಿಣಿಯಾಗಿದ್ದು, ಆದರೆ ಒತ್ತಾಯಪೂರ್ವಕವಾಗಿ ಮಾತ್ರೆ ತಿನ್ನಿಸಿ ಅಬಾರ್ಷನ್ ಮಾಡಿಸಿದ್ದಾರೆ. ಬಳಿಕ ಹಣಕ್ಕಾಗಿ ಪೀಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದೀಗ ಪತಿಯ ಕಿರುಕುಳ ಮತ್ತು ತಲಾಖ್‌ ನೀಡಿದ್ದರಿಂದ ದಿಕ್ಕು ತೋಚದಂತಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹುಸೇನ್‌ ಈ ಹಿಂದೆ ಇದ್ದ ಪತ್ನಿಗೂ ಹಣಕ್ಕಾಗಿ ಪೀಡಿಸಿ ಕೊನೆಗೆ ತಲಾಖ್ ನೀಡಿ ಇದೀಗ ಎರಡನೇ ಪತ್ನಿ ಶಬಾನಾಗೂ ಹುಸೇನ್‌ ತಲಾಖ್ ನೀಡಿದ್ದಾರೆ. ತಲಾಖ್ ನೀಡಿ ಎರಡು ಮಕ್ಕಳೊಂದಿಗೆ ಶಬಾನಾ ಅವರನ್ನು ಮನೆಯಿಂದ ಹೊರದಬ್ಬಿದ ಕಾರಣ ನನಗೆ ನ್ಯಾಯ ಕೊಡಿಸಿ ಎಂದು ಮಾಧ್ಯಮಗಳ ಮುಂದೆ ಶಬಾನಾ ಅಳಲು ತೋಡಿಕೊಂಡಿದ್ದಾರೆ. ಪತಿಯ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಯಿತು. ಇದೀಗ ತ್ರಿಪಲ್ ತಲಾಖ್ ನೀಡಿ ಅನ್ಯಾಯವೆಸಗಿದ್ದಾರೆ. ನನಗಾದ ಪರಿಸ್ಥಿತಿ ಯಾವುದೇ ಹೆಣ್ಣು ಮಗಳಿಗೆ ಆಗ ಬರಬಾರದೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

5 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

5 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

6 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

6 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

6 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

7 hours ago