News Karnataka Kannada
Friday, April 19 2024
Cricket
ಮೈಸೂರು

ಸೌಜನ್ಯ ಪ್ರಕರಣ: ಮರು ತನಿಖೆಗೆ ಆಗ್ರಹಿಸಿ, ಜು.20 ರಂದು ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ

Soujanya case: Massive protest in Nanjangud on July 20, demanding re-investigation
Photo Credit : News Kannada

ನಂಜನಗೂಡು: ಧರ್ಮಸ್ಥಳದ ಯುವತಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಆಗ್ರಹಿಸಿ ಜು.20 ರಂದು ನಂಜನಗೂಡಿನಲ್ಲಿ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಹೇಳಿದರು.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣದ ನ್ಯಾಯಬದ್ಧ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ರೈತ, ದಲಿತ, ಕಾರ್ಮಿಕ ಸಂಘಟನೆಗಳಿಂದ ನಂಜನಗೂಡು ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ತಾಲ್ಲೂಕು ಆಡಳಿತ ಭವನದವರೆಗೆ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು.

ಧರ್ಮಕ್ಕೆ ಹೆಸರಾದ ಧರ್ಮಸ್ಥಳದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಪ್ರಕರಣ ಇಡೀ ಸಮಾಜವೇ ತಲೆತಗ್ಗಿಸುವಂತಹದ್ದು. ಆದರೆ ವ್ಯವಸ್ಥಿತವಾಗಿ ಮುಚ್ಚಿಹಾಕಲಾಗಿದೆ ಎಂದು ದೂರಿದರು.

ನಿಜವಾದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಕೂಡಲೆ ಮರು ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಚುಂಚನಹಳ್ಳಿ ಮಲ್ಲೇಶ್, ಕಾರ್ಯ ಬಸವಣ್ಣ, ಬೊಕ್ಕಹಳ್ಳಿ ಮಹದೇವಸ್ವಾಮಿ, ವಾಲ್ಮೀಕಿ ಸಂಘಟನೆಯ ರಂಗಸ್ವಾಮಿ ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು