News Karnataka Kannada
Saturday, May 04 2024
ಮಂಗಳೂರು

ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಪಾದಯಾತ್ರೆ

Soujanya case: Padayatra to Bengaluru demanding re-investigation
Photo Credit : News Kannada

ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತೋಷ್ ರಾವ್ ನಿರ್ದೋಷಿಯಾದರೆ, ನೈಜವಾದ ಆರೋಪಿಗಳ ಬಂಧನವಾಗಬೇಕಾಗಿದೆ. ಪ್ರಕರಣವನ್ನು ಮರು ತನಿಖೆ ಮಾಡಬೇಕು, ತನಿಖಾಧಿಕಾರಿಗಳ ತನಿಖೆಯಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಆ.26 ರಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್‌ಎಸ್ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.8 ರಂದು ವಿಧಾನಸೌಧಕ್ಕೆ ತಲುಪಲಿದೆ. ರಾಜ್ಯದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ಮತ್ತು ಕುಟುಂಬದವರಿಗೆ ಸಹಕಾರವಾಗಲು ಸೌಜನ್ಯ ಮಹಿಳಾ ಸುರಕ್ಷಾ ಆಯೋಗವನ್ನು ಸ್ಥಾಪಿಸುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಪಾದಯಾತ್ರೆ ನಡೆಯಲಿದೆ ಎಂದರು.

ರಾಜ್ಯದಲ್ಲಿ ಅಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ನ್ಯಾಯ ಕೊಡದೆ ಅನ್ಯಾಯ ಮಾಡುತ್ತಿದೆ, ವಿರೋಧ ಪಕ್ಷ ಬಿಜೆಪಿ ಪಕ್ಷವು ನ್ಯಾಯ ಕೊಡಿಸಲು ಮುಂದಾಗಿಲ್ಲ ಹಾಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯದಲ್ಲಿ ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಪ್ರವೀಣ್ ಜಾರ್ಜ್, ರಘುಪತಿ ಭಟ್, ಕಾರ್ಯದರ್ಶಿ ಸುನೀತಾ ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು