News Karnataka Kannada
Friday, May 10 2024
ಮಂಗಳೂರು

ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಯಾಗುವಂತೆ ಕಾನತ್ತೂರು, ಧರ್ಮಸ್ಥಳಕ್ಕೆ ಹರಕೆ ಹೊತ್ತ ಸೌಜನ್ಯಳ ಮಾವ

sowjanya case
Photo Credit : By Author News Kannada

ಮಂಗಳೂರು: ಧರ್ಮಸ್ಥಳದ ಸಮೀಪ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಮರುಜೀವ ಬಂದಿದೆ. ಸಿಬಿಐ ವಿಶೇಷ ಕೋರ್ಟ್‌ ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ. ಈ ನಡುವೆಯೇ ಸೌಜನ್ಯಳ ಮಾವ ಇದೀಗ ಸೌಜನ್ಯ ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು, ಹಾಗಾದರೆ ನಾನು ಹರಕೆ ತೀರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಠಲ ಗೌಡ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದಾರೆ. ಸೌಜನ್ಯ ಅತ್ಯಾಚಾರಿಗಳಿಗೆ 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವಗಳಿಗೆ ಬಂಗಾರ ನಾಲಿಗೆ, 1 ದಿನದ ನೇಮೋತ್ಸವವನ್ನು ನೀಡುತ್ತೇವೆ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಬೆಳ್ಳಿ ರಥ, ಅಣ್ಣಪ್ಪನಿಗೆ ಬಂಗಾರದ ಕಡಸಾಲೆ ಹರಕೆಯಾಗಿ ಒಪ್ಪಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕವಾದರೂ ಅತ್ಯಾಚಾರಿ ಹಂತಕರಿಗೆ ಶಿಕ್ಷೆಯಾಗಬಹುದ ಎಂದು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು