Categories: ಮಂಗಳೂರು

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು: ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ

ಉಳ್ಳಾಲ: ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್. ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ‌.

ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ, ಉಚ್ಚಿಲ‌-ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಭಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

Gayathri SG

Recent Posts

ಮೃಣಾಲ್ ಹೆಬ್ಬಾಳ್ಕರ್​ ಪರ ನೇಹಾ ತಂದೆ ಪ್ರಚಾರ; ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

9 mins ago

ಇಂದು ಚಕ್ರವರ್ತಿ ಸೂಲಿಬೆಲೆ ನಮೋ ಭಾರತ ಕಾರ್ಯಕ್ರಮದಲ್ಲಿ ಭಾಗಿ

ತಾಲೂಕಿನ ಕರಜಗಿ ಗ್ರಾಮದಲ್ಲಿ ಇಂದು ಸಾಯಂಕಾಲ 6 ಗಂಟೆಗೆ ನಮೋ ಬ್ರಿಗೇಡ್ ವತಿಯಿಂದ ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು ಬಹಿರಂಗ…

15 mins ago

ಗನ್‌ ಪಾಯಿಂಟ್‌ ಇಟ್ಟು ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ !

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

26 mins ago

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

40 mins ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

56 mins ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

1 hour ago