News Karnataka Kannada
Sunday, April 28 2024
ಮಂಗಳೂರು

ಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಮಠಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ ಸ್ಪೀಕರ್

Speaker visits mutt at midnight after Krishna's birth
Photo Credit : News Kannada

ಉಡುಪಿ: ಎಲ್ಲೆಲ್ಲೂ ಕೃಷ್ಣಾಷ್ಟಮಿಯ ಸಂಭ್ರಮ, ಸಡಗರ. ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈ ಸಂದರ್ಭ ನಡೆಯುತ್ತಿವೆ. ಭಗವಾನ್ ಶ್ರೀಕೃಷ್ಣ ಮಥುರಾದಲ್ಲಿ ಮಧ್ಯರಾತ್ರಿ ಜನಿಸಿದ್ದು ಇತಿಹಾಸ. ಅದೇ ಮಧ್ಯರಾತ್ರಿಯ ಸಮಯ, ಅದೇ ಗಳಿಗೆಯಲ್ಲಿ ಉಡುಪಿಯ ಶ್ರೀಕೃಷ್ಣಮಠಕ್ಕೆ ಸ್ಪೀಕರ್ ಖಾದರ್ ಸಾಹೇಬರು ಮಠಕ್ಕೆ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದರು.

ಮಠದ ಸತ್ಯನಾರಾಯಣ ಭಟ್ ಅವರು ಸ್ಪೀಕರ್ ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ದೇವರ ಪ್ರಸಾದವನ್ನು ನೀಡಿ ಹರಸಿದರು.

ಸ್ಪೀಕರ್ ಅವರೊಂದಿಗೆ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ, ಮುಸ್ತಫಾ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3.2 / 5. Vote count: 5

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು