Categories: ಮಂಗಳೂರು

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಐಜಿಪಿ ಡಾ.ಚಂದ್ರ ಗುಪ್ತ ಅಭಿಪ್ರಾಯ

ಮಂಗಳೂರು, ಮಾ.19:  ದೈನಂದಿನ ಕೆಲಸದ ಒತ್ತಡ ನಿವಾರಣೆಗೆ  ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ ಕ್ಲಬ್  ಹಾಗೂ ಪತ್ರಿಕಾಭವನ ಟ್ರಸ್ಟ್ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ  ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರ  ಸಂಘಟನೆಗೂ ಈ ರೀತಿಯ ಕ್ರೀಡಾ ಕೂಟ ಸಹಕಾರಿ ಮಾನಸಿಕ ಮತ್ತು ದೈಹಿಕ ಒತ್ತಡ ಗಳನ್ನು ನಿವಾರಿಸಲು ಕ್ರೀಡೆ ಸಹಕಾರಿ ಎಂದು ಚಂದ್ರ ಗುಪ್ತ ಶುಭ ಹಾರೈಸಿದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕ್ರಿಕೆಟ್ ಪಂದ್ಯಾಟವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಿ ಮಾತನಾಡುತ್ತಾ, ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ ಸುದ್ದಿ ಮನೆಯ ಒತ್ತಡದ ನಡುವೆ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆಜ್ಜಮಾಡ ರಮೇಶ್ ಕುಟ್ಟಪ್ಪ, ಕಾಮನ್ವೆಲ್ತ್‌ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತ ಖುತ್ವಿಕ್ ಅಲೆವೂರಾಯ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್  ,ಮಂಗಳೂರು. ಅಧ್ಯಕ್ಷ ಆರ್.ರಾಮ ಕೃಷ್ಣ,ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ , ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ , ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಪದಾಧಿಕಾರಿಗಳಾದ  ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸುರೇಶ್ ಡಿ ಪಳ್ಳಿ , ಶ್ರವಣ್ ಕುಮಾರ್ ನಾಳ, ಸುಖ್ ಪಾಲ್ ಪೊಳಲಿ  ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ  ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.
Umesha HS

Recent Posts

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

58 seconds ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

5 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

15 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

20 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

54 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago