News Karnataka Kannada
Wednesday, May 08 2024
ಮಂಗಳೂರು

ಮಂಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

Sri Ram Sene chief Pramod Muthalik taken into police custody
Photo Credit : By Author

ಮಂಗಳೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮಂಗಳೂರು ಪೊಲೀಸರು ಶುಕ್ರವಾರ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆ ಪ್ರವೇಶಿಸದಂತೆ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದರೂ ಮುತಾಲಿಕ್ ಆಗಮಿಸಿದ್ದರಿಂದ ಅವರನ್ನು ವಶಕ್ಕೆ ಪಡೆದು ವಾಪಾಸು ಕಳುಹಿಸಲಾಗಿದೆ.

ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಕೊಲೆ ಪ್ರಕರಣಗಳಿಂದ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿರ್ಬಂಧ ಹೇರಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಮಂಗಳೂರು ನಗರ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ಪ್ರವೇಶಿಸುವುದಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಿ ಗುರುವಾರ ಆದೇಶ ಹೊರಡಿಸಿದ್ದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು