Categories: ಮಂಗಳೂರು

ಮಂಗಳೂರು:ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿಸಲು ಅಧ್ಯಯನ ಸಮಿತಿ ರಚನೆ

ಮಂಗಳೂರು:ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಬೇಕೆಂದು ಗಣ್ಯರು,ಸಂಘ ಸಂಸ್ಥೆಗಳು,ಸಾರ್ವಜನಿಕರಿಂದ ಮನವಿಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ತುಳು ಭಾಷೆಯ ಕುರಿತಂತೆ ಹಾಲಿ ಇರುವ ನಿಯಮಗಳು, ಕಾನೂನಿನ ಚೌಕಟ್ಟಿನಲ್ಲಿ ಈ ಕುರಿತು ಆಗುವ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸಿ ವಾಸ್ತವಾಂಶದ ವರದಿಯನ್ನು ಸೂಕ್ತ ಶಿಫಾರಸಿನೊಂದಿಗೆ ಸಲ್ಲಿಸುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಕೋರಲಾಗಿತ್ತು.

ತುಳು ಭಾಷೆಯನ್ನು ಕರ್ನಾಟಕ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಈ ಕೆಳಕಂಡ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.

ಡಾ|| ಮೋಹನ್ ಆಳ್ವ (ಅಧ್ಯಕ್ಷರು), ಕೇಶವ ಬಂಗೇರ ನಾರಾಯಣಗುರು (ಸದಸ್ಯರು), ಡಾ|| ಮಾಧವ ಕೋಣಾಜೆ (ಸದಸ್ಯರು), ಗಣೇಶ್ ಆ ಸಂಕಮಾರೆ ಮಂಗಳೂರು (ಸದಸ್ಯರು), ಪೃಥ್ವಿ ಕವತರ್‌ ಮಣಿಪಾಲ (ಸದಸ್ಯರು), ವಸಂತಶೆಟ್ಟಿ ಉಡುಪಿ (ಸದಸ್ಯರು), ಚಂದ್ರಹಾಸ ಕಣಂತೂರ್ ಹಿರಿಯ ಕಥೆಗಾರರು ಮತ್ತು ಲೇಖಕರು (ಸದಸ್ಯರು), ಶ್ರೀಮತಿ ಸಂಧ್ಯಾ ಆಳ್ವ (ಸದಸ್ಯರು), ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ನಿರ್ದೇಶಕರು). ಈ  ಸಮಿತಿಯು ಅಧ್ಯಯನ ಮಾಡಿ, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸುವ ಕುರಿತು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ

Sneha Gowda

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

15 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

33 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

50 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago