News Karnataka Kannada
Tuesday, April 30 2024
ಮಂಗಳೂರು

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನ ಘಟ್ಟ ಮುಳುಗಡೆ, ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ

Subramanya: Kumaradhara bathing ghat submerged, devotees advised not to venture into water
Photo Credit : News Kannada

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದ್ದು, ಮಳೆಯಬ್ಬರ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆಯನ್ನು ಕೂಡ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಸಾರ್ವಜನಿಕರು ಎಚ್ಚರವಾಗಿರುವಂತೆಯೂ ಇಲಾಖೆ ಸೂಚನೆಯನ್ನು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು