Categories: ಮಂಗಳೂರು

ಯೇನೆಪೋಯ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

ಮಂಗಳೂರು: ಮಂಗಳೂರಿನ ಯನೆಪೋಯ ವೈದ್ಯಕೀಯ ಕಾಲೇಜ್ ಆಸ್ಪತ್ರೆಯ ಹೃದಯ ಶಸ್ತ್ರ ಚಿಕಿತ್ಸಕರ ತಂಡವು ಇತ್ತೀಚೆಗೆ, ಅತ್ಯಂತ ಅಪರೂಪದ ಜನ್ಮಜಾತ ಖಾಯಿಲೆಯಾದ ಎಬ್ಸ್ಟೀನ್ ಅನಾಮಲಿ ಎನ್ನುವ ಹೃದಯದ ಬಲ ಭಾಗದ ಕವಾಟದ ದೋಷದ ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದರು.

ಎಬ್ಸ್ಟೀನ್ ಖಾಯಿಲೆಯಿಂದ ಬಳಲುತ್ತಿದ್ದ 36 ವರ್ಷದ ಚಿತ್ರದುರ್ಗದ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಯೇನೆಪೋಯ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನುರಿತ ಹೃದ್ರೋಗ ಶಸ್ತ್ರ ಚಿಕಿತ್ಸಕರ ತಂಡವು(ಡಾ॥ಶಕ್ತಿವೇಲ್, ಡಾ॥ಗಣೇಶ್ ಕಾಮತ್, ಡಾ॥ಅರ್ಜುನ್,ಡಾ॥ನೀಲೇಶ್, ಡಾ॥ಕೃಷ್ಣಪ್ರಸಾದ್, ಡಾ॥ಮೋಹನದಾಸ್, ಡಾ॥ವಿನಾಯಕ್ ಸೂಕ್ತಪರೀಕ್ಷೆಗಳ ನಂತರ ರೋಗಿಯನ್ನು “ಕೋನ್ ರಿಪೇರ್” ಎನ್ನುವ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿ ಕವಾಟವನ್ನು ಸರಿಪಡಿಸಿದರು.

ಇಂತಹ ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆಯನ್ನು ನಿರ್ವಹಿಸುವ ಕರ್ನಾಟಕದ ಬೆರಳೆಣಿಕೆಯ ಕೇಂದ್ರಗಳಲ್ಲಿ ಯೇನೆಪೋಯ ಹೃದ್ರೋಗ ಕೇಂದ್ರವೂ ಒಂದಾಗಿದೆ. ಇದು ಇಂತಹ ಖಾಯಿಲೆಗೆ ಯೇನೆಪೋಯ ವೈದ್ಯಕೀಯ ಕಾಲೇಜಿನ ಹೃದ್ರೋಗ ತಂಡವು ಯಶಸ್ವಿಯಾಗಿ ನಿರ್ವಹಿಸಿದ ಈವರೆಗಿನ ಮೂರನೆಯ ಶಸ್ತ್ರ ಚಿಕಿತ್ಸೆಯಾಗಿದೆ.

ಈ ತರಹದ ಶಸ್ತ್ರ ಚಿಕಿತ್ಸೆಯಲ್ಲಿ ಹೃದಯ ಬಡಿತದ ವ್ಯತ್ಯಾಸವಾಗಿ(ಹಾರ್ಟ್ ‌ಬ್ಲಾಕ್‌), ಕೃತಕ ನಿಯಂತ್ರಕವನ್ನು(ಪೇಸ್ ಮೇಕರ್) ಅಳವಡಿಸಬೇಕಾದ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಅತ್ಯಂತ ಸೂಕ್ಷ್ಮತೆಯಿಂದ ಶಸ್ತ್ರ ಕ್ರಿಯೆಯನ್ನು ನಿಭಾಯಿಸುವ ಮೂಲಕ ಇದನ್ನು ತಡೆಯುವಲ್ಲಿ ತಂಡವು ಯಶಸ್ವಿಯಾಗಿದೆ. ಈವರೆಗಿನ ಮೂರು ರೋಗಿಗಳಲ್ಲಿ ಇದು ಅತ್ಯಂತ ಕ್ಲಿಷ್ಟಕರವಾದ ಮೂರನೆಯ ವಿಧದ ಎಬ್ಸ್ಟೀನ್ ಖಾಯಿಲೆಯಾಗಿದ್ದು, ಶಸ್ತ್ರ ಚಿಕಿತ್ಸೆಯು ಅತ್ಯಂತ ಸವಾಲಿನಿಂದ ಕೂಡಿತ್ತು. ಸರಿಯಾದ ಹೃದಯ ಬಡಿತ, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬಲ ಕವಾಟ ಹಾಗೂ ಹೃತ್ಕಕ್ಷಿಯೊಂದಿಗೆ ಗುಣಮುಖವಾಗಿ ಮಹಿಳೆಯು ಆಸ್ಪತ್ರೆಯಿಂದ ನಿರ್ಗಮಿಸಿದ್ದಾರೆ.

ಯೇನೆಪೋಯ ವೈದ್ಯಕೀಯ ಕಾಲೇಜ್ ಆಸ್ಪತ್ರೆಯ ಹೃದ್ರೋಗ ಶಸ್ತ್ರ ಚಿಕಿತ್ಸಕರ ತಂಡವು ನುರಿತ ಹೃದಯ ಶಸ್ತ್ರ ಚಿಕಿತ್ಸಕರು, ಹೃದ್ರೋಗ ಅರವಳಿಕೆ ತಜ್ಞರು, ಪರ್ಫ್ಯೂಷನಿಷ್ಟ್, ಶುಷ್ರೂಶಕಿಯರು, ತಂತ್ರಜ್ಞರು ಹಾಗೂ ನುರಿತ ಶಸ್ತ್ರ ಚಿಕಿತ್ಸಾ ನಂತರದ ತೀವ್ರ ನಿಗಾ ಘಟಕವನ್ನು ಒಳಗೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ॥ ಹಬೀಬ್ ರೆಹಮಾನ್ ಅವರು ಹೇಳಿದರು.

Ashika S

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

5 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

20 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

33 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

56 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago