News Karnataka Kannada
Monday, April 29 2024
ಮಂಗಳೂರು

ಸುಳ್ಯ: ಅಪಘಾತಕ್ಕೀಡಾದವರಿಗೆ ತನ್ನ ವಾಹನದಲ್ಲೇ ಕಾರ್ಯಕ್ರಮಕ್ಕೆ ಕಳಿಸಿಕೊಟ್ಟ ಅರುಣ್ ಪುತ್ತಿಲ

Hindu society doesn't wear bangles on its hands: Puttila against 'love jihad'
Photo Credit : Facebook

ಸುಳ್ಯ: ಕಾರೊಂದು ಅಪಘಾತಕ್ಕೀಡಾದ ವೇಳೆ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಕಾರ್ಯಕ್ರಮಕ್ಕೆ ಕಳುಹಿಸುವ ಮೂಲಕ ಹಿಂದೂ ನಾಯಕ ಅರುಣ್ ಪುತ್ತಿಲ ಮಾನವೀಯತೆ ಮೆರೆದಿದ್ದಾರೆ.

ಶುಂಠಿಕೊಪ್ಪದಿಂದ ಮುಡಿಪಿಗೆ ಕಾರಿನಲ್ಲಿ ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮುಕ್ರಂಪಾಡಿನ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಅರುಣ್ ಪುತ್ತಿಲ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹಾಗೂ ತಮ್ಮ ಕಾರಿನಲ್ಲೇ ಮುಡಿಪಿನ ಕಾರ್ಯಕ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು