Categories: ಮಂಗಳೂರು

ಸುಳ್ಯ: ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಸಾವು

ಸುಳ್ಯ: ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದರು. ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ನಿತ್ಯಾನಂದರವರು ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಹಳೆಯ ದ್ವೇಷದ ಕಾರಣದಿಂದ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.

Ashika S

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

15 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

48 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago