News Karnataka Kannada
Wednesday, May 08 2024
ಮಂಗಳೂರು

ಸುಳ್ಯ: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು

Five die in Thane hospital in a single day
Photo Credit : Pixabay

ಸುಳ್ಯ: ತೆಂಗಿನ ಮರದಿಂದ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ಕಾರ್ಮಿಕನೋರ್ವ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ‌ ಬೊಳ್ಳಾಜೆ‌ ಎಂಬಲ್ಲಿ ನಡೆದಿದೆ. ಇಲ್ಲಿನ ನಾರ್ಣಕಜೆ ದಿ.ಕುಂಞ ಎಂಬುವರ ಪುತ್ರ ಹರೀಶ (29 ವರ್ಷ) ಎಂಬವರೇ ಮೃತ ವ್ಯಕ್ತಿ.

ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು ಸಚಿನ್‌ ಕೆ ಎಸ್ ಎಂಬವರ ಜಾಗದಲ್ಲಿ ತೆಂಗಿನ ಕಾಯಿ ತೆಗೆಯಲು ಈ ಜಾಗವನ್ನು ನೋಡಿಕೊಳ್ಳುತ್ತಿದ್ದ ಮನಮೋಹನ ಕೆ ಎಂಬುವರು ಇಬ್ಬರನ್ನು ಕರೆಸಿಕೊಂಡಿದ್ದರೆನ್ನಲಾಗಿದೆ. ಮಧ್ಯಾಹ್ನದ ಸುಮಾರಿಗೆ ಹರೀಶ  ತೆಂಗಿನ ಮರದಿಂದ ಕಾಯಿ ಕಿತ್ತು ಇಳಿಯುತ್ತಿದ್ದಾಗ ಸ್ಮೃತಿ ತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ.
ಕೂಡಲೇ ಅಲ್ಲಿ ಇದ್ದವರು ಅಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು, ಪತ್ನಿ ಹಾಗೂ‌ ಮಕ್ಕಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು