Categories: ಮಂಗಳೂರು

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಸುಳ್ಯ: ಹಣದ ಬೇಡಿಕೆ ಇಟ್ಟು ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪಾಜೆ-ಅರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಚಕ ಟ್ವಿಸ್ಟ್ ಲಭಿಸಿದೆ. ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಅವರನ್ನು ಲೋಕಾಯುಕ್ತ ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಲೋಕಾಯುಕ್ತ ಎಸ್ ಪಿ ಸೈಮನ್ ಮಾತನಾಡಿ, ದೂರು ಸ್ವೀಕರಿಸಿ ನಾವು ತನಿಖೆ ಮಾಡಿದ್ದೇವೆ. ಎರಡು ದಿನ ಮುಂಚೆಯೇ ದೂರು ದಾಖಲಾಗಿತ್ತು. ಗ್ರಾಮ ಕರಣಿಕ ಕೆಲಸ ಮಾಡಿಸಿಕೊಡುವುದಕ್ಕೆ ಮುಂಗಡವಾಗಿ ಮೂರು ಸಾವಿರ ರೂ. ಹಣ ಪಡೆದುಕೊಂಡಿದ್ದರು. ಇದೀಗ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮುಂದೆ ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅರಂತೋಡಿನ ವ್ಯಕ್ತಿಯೊಬ್ಬರು ಹಕ್ಕು ಖುಲಾಸೆಗಾಗಿ ಅರ್ಜಿ ಸ್ವೀಕರಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಗ್ರಾಮ ಲೆಕ್ಕಾಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು (ಶನಿವಾರ) ಹಣ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಸುಳ್ಯ ತಾಲೂಕು ಕಚೇರಿಯಲ್ಲಿ ಇದೀಗ ಗ್ರಾಮ ಲೆಕ್ಕಾಧಿಕಾರಿಯ ವಿಚಾರಣೆಯನ್ನು ನಡೆಸಿದರು. ಎಷ್ಟು ಹಣ ತೆಗೆದುಕೊಂಡಿದ್ದಾರೆ ಅನ್ನುವುದು ಇನ್ನೂ ಗೊತ್ತಾಗಿಲ್ಲ. ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

 

Gayathri SG

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

9 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

42 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

56 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago