Categories: ಮಂಗಳೂರು

ಸುಳ್ಯ: ಪ್ರವೀಣ್ ನೆಟ್ಟಾರು ಪ್ರಕರಣ, ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್

ಸುಳ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಒಂದೊಂದೇ ಮಾಹಿತಿ ಹೊರಬೀಳುತ್ತಿದೆ. ಇದೀಗ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಇದರಲ್ಲಿ ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದಂತಾಗಿದೆ.

ಚಾರ್ಜ್​ಶೀಟ್ ಸಲ್ಲಿಸಲಾದ ತುಫೈಲ್ ಕೊಡಗು ಮೂಲದವನೆಂದು ತಿಳಿದು ಬಂದಿದೆ. ಈತ ಪಿಎಫ್ಐ ಸರ್ವೀಸ್ ಟೀಂನ ಸಕ್ರಿಯ ಸದಸ್ಯನಾಗಿದ್ದು, ಮಾಸ್ಟರ್ ಟ್ರೈನರ್ ಆಗಿಯೂ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ದಕ್ಷಿಣ ಕನ್ನಡದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ನಲ್ಲಿ ಪಿಎಫ್ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಎಂಬ ಮಾಹಿತಿಯೂ ಹೊರಬಿದ್ದಿದೆ.

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಈತ ತಮಿಳುನಾಡಿನ ಈರೋಡ್,ಕೊಡಗು,ಮೈಸೂರುಗಳಲ್ಲಿ ಆಶ್ರಯ ನೀಡಿದ್ದನೆಂದು ತಿಳಿದು ಬಂದಿದೆ. ಮತ್ತೋರ್ವ ಆರೋಪಿ ಮೊಹಮ್ಮದ್ ಜಬೀರ್ ದಕ್ಷಿಣ ಕನ್ನಡ ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷನಾಗಿದ್ದು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ ನಡೆದಿದ್ದ ಸಭೆಗಳಲ್ಲಿ ಭಾಗಿಯಾಗಿದ್ದ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

Ashika S

Recent Posts

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದ ಹೆಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು…

17 mins ago

ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವು

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್‌ ನಲ್ಲಿ…

36 mins ago

ಕಾಂಗ್ರೆಸ್‍ ನ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

57 mins ago

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

2 hours ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

2 hours ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

2 hours ago