Categories: ಮಂಗಳೂರು

ಸುಳ್ಯ: 10.5 ಕೋಟಿ ರೂ. ವೆಚ್ಚದ ಕಳಪೆ ಕಾಮಗಾರಿ, ಅಧಿಕಾರಿಗಳ ಚಳಿ ಬಿಡಿಸಿದ ಗ್ರಾಮಸ್ಥರು!

ಸುಳ್ಯ: 10.5 ಕೋಟಿ ಮೊತ್ತದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆಯಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಚಾರ್ ನಲ್ಲಿ ನಡೆದಿದೆ.

ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ 4 ವರ್ಷದ ಹಿಂದೆ ಕೊಲ್ಚಾರ್ – ಕನ್ನಡಿ ತೋಡು – ಬಂದಡ್ಕ ಅಂತರಾಜ್ಯ ಸಂಪರ್ಕ‌ ರಸ್ತೆಯ ಕಲ್ಲೆಂಬಿ ಯಿಂದ ಕರ್ನಾಟಕ ಗಡಿ ಕನ್ನಡಿತೋಡು ತನಕ ಸುಮಾರು 10.5 ಕೋಟಿ ಮೊತ್ತದ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ.

ಕಾಮಗಾರಿ ಕಳಪೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪರಮೇಶ್ವರ್ ಹಾಗೂ ಗುತ್ತಿಗೆದಾರ ಪೃಥ್ವಿ ಸುವರ್ಣರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಗ್ರಾಮಸ್ಥರ ಜೊತೆ ಮಾತನಾಡಿದ ಇಂಜಿನಿಯರ್ ಪರಮೇಶ್ವರ್ ಕಾಮಗಾರಿ ಕಳಪೆಯಾಗಿದ್ದರೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿಗಳು ಭರ್ಜರಿಯಾಗಿ ಸಾಗುತ್ತಿದ್ದು, ಹಲವೆಡೆ ಕಾಮಗಾರಿಗಳು ಕಳಪೆಯಾಗಿ ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿವೆ.

ಕಳಪೆ ಕಾಮಗಾರಿ ವಿರುದ್ದ ಗ್ರಾಮಸ್ಥರ ಆಕ್ರೋಶ:

ಪ್ರತಿಭಟನೆಯಲ್ಲಿ ಸ್ಥಳೀಯ ಮುಖಂಡರಾದ ಪಂಚಾಯತ್ ಮಾಜಿ ಸದಸ್ಯ ಸೀತಾರಾಮ ಕೊಲ್ಲರಮೂಲೆ, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ, ನ್ಯಾಯವಾದಿ ಸತೀಶ್ ಕುಂಭಕ್ಕೋಡು, ಪಂಚಾಯತ್ ಸದಸ್ಯೆ ಶಂಕರಿ ಕೊಲ್ಲರಮೂಲೆ, ಆಲೆಟ್ಟಿ ಸೊಸೈಟಿ ನಿರ್ದೇಶಕ ಸುದರ್ಶನ ಪಾತಿಕಲ್ಲು, ಜಗದೀಶ್ ಕೂಳಿಯಡ್ಕ,ಪ್ರಣೀತ್ ಕಣಕ್ಕೂರು, ಯಶಸ್ ಕೊಯಿಂಗಾಜೆ, ಪ್ರದೀಪ್ ಕೊಲ್ಲರಮೂಲೆ, ನೀಲಕಂಠ ಕೊಲ್ಲರಮೂಲೆ, ಚಿದಾನಂದ ಕೋಲ್ಚಾರು, ವಿನೋದ್ ಕೊಯಿಂಗಾಜೆ, ಮಣಿಕಂಠ ಹಾಸ್ಪಾರೆ, ಕಮಲಾಕ್ಷ ಕೊಯಿಂಗಾಜೆ, ಸಜೇಶ್ ಕೊಯಿಂಗಾಜೆ, ಲಕ್ಷ್ಮಣ ಕಣಕ್ಕೂರು, ಬಾಲಕೃಷ್ಣ ಕಣಕ್ಕೂರು, ಹರೀಶ್ ಕೋಲ್ಚಾರು, ಜಯರಾಜ್ ಕಣಕ್ಕೂರು, ಹೇಮಾವತಿ ಕುಡೆಂಬಿ, ಪುರುಷೋತ್ತಮ ಕುಂಭಕ್ಕೋಡು, ಮತ್ತಿತರರು ಭಾಗವಹಿಸಿದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago