Categories: ಮಂಗಳೂರು

ಸುಳ್ಯ: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ

ಸುಳ್ಯ:  ಕೊಡಿಯಾಲಬೈಲು  ಕಾಲೇಜಿನ ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿ ತಂಡವೊಂದು ವಿದ್ಯಾರ್ಥಿ ಗಂಭೀರ ಹಲ್ಲೆ ನಡೆಸಿದ್ದು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಕ್ಷಿತ್ ಧನುಶ್ ಪ್ರಜ್ವಲ್ ತನೋಜ್ ಅಕ್ಷಯ್ ಮೋಕ್ಷಿತ್ ಗೌತಮ್ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್ ಐಪಿಸಿ ಪ್ರಕಾರ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಕೊಡಿಯಾಲಬೈಲು ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಸನಿಫ್ ಎಂದು ತಿಳಿದುಬಂದಿದೆ.

ಕಾಲೇಜಿನ ವಿದ್ಯಾರ್ಥಿಯೊಬ್ಬಳು ತನ್ನ ಸ್ನೇಹಿತೆಯಾಗಿದ್ದು ಆಕೆಯೊಂದಿಗೆ ಮಾತನಾಡುವುದು ಕೆಲವರಿಗೆ ಇಷ್ಟವಿಲ್ಲದ ಕಾರಣ ಅಗಸ್ಟ್ 30 ರಂದು ಬೆಳಿಗ್ಗೆ 10.30 ಕ್ಕೆ ನಾನು ಕ್ಲಾಸ್ ರೂಮ್ ನಲ್ಲಿರುವಾಗ ನಮ್ಮ ಕಾಲೇಜಿನಲ್ಲಿ ಓದಿದ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಕ್ಲಾಸ್ ರೂಮಿನಿಂದ ನನ್ನನ್ನು ಕರೆದು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿ ಅಲ್ಲೇ ಇದ್ದ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ತನುಜ್ ಅಕ್ಷಯ್ ಮೋಕ್ಷಿತ್ ಹಾಗೂ ಸುಳ್ಯದ  ಖಾಸಗಿ ಕಾಲೇಜಿನ ಗೌತಮ್ ಮತ್ತಿತರರು ಕಾಲರ್ ಪಟ್ಟಿ ಹಿಡಿದು ನೀನು ಆ ಹುಡುಗಿ ಜೊತೆ ಯಾಕೆ ಮಾತನಾಡುತ್ತೀಯಾ ಎಂದು ಹೇಳುತ್ತಾ ಅವರ ಕೈಯಲ್ಲಿದ್ದ ದೊಣ್ಣೆಯಿಂದ ನನ್ನ ಬೆನ್ನಿಗೆ ಹೊಡೆದು ನೆಲಕ್ಕೆ ದೂಡಿ ಹಾಕಿ ಕಾಲಿನಿಂದ ತುಳಿದು ಇನ್ನು ಮುಂದಕ್ಕೆ ಮಾತನಾಡಿದರೆ ನಿನ್ನನ್ನು ಜೀವಸಹಿತ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಂತರ ಮನೆಯವರಿಗೆ ವಿಷಯ ತಿಳಿಸಿ ಗಂಭೀರ ಗಾಯಗೊಂಡ ಪರಿಣಾಮ ಸುಳ್ಯ ಸರಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ನನ್ನ ಮೇಲೆ ಹಲ್ಲೆ ಮಾಡಿದ  ದುಷ್ಕರ್ಮಿಗಳ ಮೇಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿರುವುದಾಗಿ ಮೊಹಮ್ಮದ್ ಸನಿಫ್ ತಿಳಿಸಿದ್ದಾರೆ.

Ashika S

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

11 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

27 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

49 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago