ಸುಳ್ಯ: ಸುಳ್ಯದ ಯುವಕನೋರ್ವ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.
ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಕುಂದಾಪುರದ ಸೌಡ ಹೊಳೆಗೆ ಈಜಲು ತೆರಳಿದ್ದರು. ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ.
ಜೊತೆಗಿದ್ದ ಯುವಕರು ತಕ್ಷಣ ಸ್ಥಳೀಯರಿಗೆ ವಿಚಾರ ತಿಳಿಸಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಧಾವಿಸಿ ಯುವಕನಿಗೆ ಹುಡುಕಾಟ ನಡೆಸುತ್ತಿದ್ದಾರೆ.ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ