Categories: ಮಂಗಳೂರು

ಯೋಗಿ ರೋಡ್‌ ಶೋ: 40 ಸಾವಿರ ಮಂದಿ ಭಾಗಿ ನಿರೀಕ್ಷೆ

ಬಂಟ್ವಾಳ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 6ರಂದು ಸಂಜೆ 4ಕ್ಕೆ  ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಪರ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.

ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಗಿ ಕಾರ್ಯಕ್ರಮದ ದೃಷ್ಟಿಯಿಂದ ಈಗಾಗಲೇ ಪಕ್ಷದ ವತಿಯಿಂದ 59 ಗ್ರಾಮಗಳ ಎಲ್ಲಾ ಬೂತ್‌ಗಳಲ್ಲೂ ಸಭೆಗಳನ್ನು ನಡೆಸಲಾಗಿದ್ದು, ಪ್ರತಿ ಬೂತ್‌ನಿಂದ ಕನಿಷ್ಠ 100 ಮಂದಿ ಭಾಗವಹಿಸಲಿದ್ದಾರೆ.

ಸಂಜೆ 4ರ ಸುಮಾರಿಗೆ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಬಿ.ಸಿ.ರೋಡಿನ ಕೈಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ರೋಡ್‌ ಶೋ ನಡೆಸಲಿರುವ ಯೋಗಿ ಅವರು ಬಳಿಕ ರೋಡ್‌ ಶೋ ವಾಹನದಲ್ಲೇ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್‌ ಕಟೀಲು, ಅಭ್ಯರ್ಥಿ ರಾಜೇಶ್‌ ನಾೖಕ್‌ ಸೇರಿದಂತೆ ಮೊದಲಾದ ಪ್ರಮುಖರು ಪಾಲ್ಗೊಳ್ಳುತ್ತಾರೆ.
ರವೀಶ್‌ ಶೆಟ್ಟಿ ಕರ್ಕಳ, ಎ.ಗೋವಿಂದ ಪ್ರಭು, ಹರಿದಾಸ್‌, ಚಿದಾನಂದ ರೈ ಕಕ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಕಿಶೋರ್‌ ಪಲ್ಲಿಪಾಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

Umesha HS

Recent Posts

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ…

17 mins ago

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ  ನಡೆದಿದೆ.

30 mins ago

ಅಂಚೆಮತಪತ್ರ ವಿತರಣೆ: ಮೇ.1 ರಂದು1262 ಜನ ಸಿಬ್ಬಂದಿಯಿಂದ ಮತದಾನ

ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ…

48 mins ago

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ…

58 mins ago

ಲೈಂಗಿಕ ದೌರ್ಜನ್ಯ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು…

1 hour ago

ಅಧಿಕ ಬಿಸಿಲಿನ ತಾಪಮಾನ, ಬಿಸಿಗಾಳಿಯಿಂದ ತತ್ತರಿಸಿದ ಧಾರವಾಡ

ಇದೀಗ ಅಧಿಕ ಬಿಸಿಲಿನ ತಾಪಮಾನ ಹಾಗೂ ಬಿಸಿಗಾಳಿಯಿಂದ ತತ್ತರಿಸುತ್ತಿದೆ. ಧಾರವಾಡ ಜಿಲ್ಲೆಯ ಜನರಂತೂ ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿದ್ದಾರೆ.

1 hour ago