News Karnataka Kannada
Sunday, May 19 2024
ಮಂಗಳೂರು

ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ, ನಿಷೇಧದ ಭೀತಿ ಮರೆಯಾಗಿದೆ- ಬೃಜೇಶ್ ಚೌಟ

Supreme Court gives green signal to Kambala, fear of ban on Kambala has vanished: Captain Brajesh Chowta
Photo Credit : Twitter

ಮಂಗಳೂರು: ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ ಎಂದು ಕ್ಯಾಪ್ಟನ್‌  ಬೃಜೇಶ್‌ ಚೌಟ ಹೇಳಿದ್ದಾರೆ.

ಕಂಬಳದ ನಿಷೇಧದ ಬಗೆಗೆ ಪ್ರಾಣಿ ದಯಾ ಸಂಘಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಈ ಹಿಂದೆ ಕರ್ನಾಟಕ ಸರಕಾರ ಪ್ರಾಣಿ ಹಿಂಸಾ ಕಾಯ್ದೆಗೆ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಿಂದ ನಮ್ಮ ಹೆಮ್ಮೆಯ ಕಂಬಳವನ್ನು ಸುಸೂತ್ರವಾಗಿ ನಡೆಸಲು ಹೆಚ್ಚಿನ ಶಕ್ತಿ ಬಂದಂತಾಗಿದೆ.

ಈ ಹೋರಾಟದಲ್ಲಿ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ, ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ, ಎಲ್ಲಾ ಕಂಬಳ ಆಯೋಜಕರುಗಳಿಗೆ, ಕಂಬಳದ ಕೋಣಗಳ ಮಾಲೀಕರಿಗೆ, ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಕ್ಯಾಪ್ಟನ್‌  ಬೃಜೇಶ್‌ ಚೌಟ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು