News Karnataka Kannada
Monday, April 29 2024
ಮಂಗಳೂರು

ಸುರತ್ಕಲ್: ಹಿಂದು ವಿರೋಧಿ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ- ಡಾ. ಭರತ್‌ ಶೆಟ್ಟಿ

A befitting reply to the anti-Hindu government in the Lok Sabha elections. Bharath Shetty
Photo Credit : News Kannada

ಸುರತ್ಕಲ್: ಹಿಂದುತ್ವದ ಮೇಲೆ ಸದಾ ಕೆಂಡ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ. ಹೇಳಿದ್ದಾರೆ.

ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು ವಿರೋಧವಾಗಿದ್ದರೂ ಲೆಕ್ಕಿಸದೆ, ಹಿಂದೂ ಸಮಾಜದ ರಕ್ಷಣೆಗಾಗಿ ಬಿಜೆಪಿ ಸರಕಾರ ಈ ನಿರ್ಧಾರ ತಳೆದಿತ್ತು. ಇದೀಗ ಒಂದೆರಡು ಸಮುದಾಯದ ಒಲೈಕೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ನಾವ್ ವಾಪಸ್ ಪಡೆಯುವ ನಿರ್ಧಾರ ತಳೆದಿರುವುದು ಮುಂದೆ ಬೃಹತ್ ಆಂದೋಲನ ಒಂದಕ್ಕೆ ನಾಂದಿ ಹಾಡಿದೆ ಎಂದು ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ.

ಲವ್ ಜಿಹಾದ್, ಮತಾಂತರ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೆ ನೆರೆಯ ಕೇರಳವನ್ನ ಕೂಡ ಬಾಧಿಸುತ್ತಿದ್ದು , ನೂರಾರು ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದೆ. ಇದರ ನಡುವೆ ಕಾಯ್ದೆ ಬಲಪಡಿಸುವ ಬದಲು ರಾಜ್ಯ ಸರ್ಕಾರದ ನಿರ್ಧಾರ ಮತಾಂತರವಾದಿ ಸಂಘಟನೆಗಳಲ್ಲಿ ಹೊಸ ಹುಮ್ಮಸ್ಸು ನೀಡಿದಂತಾಗಿದೆ ಎಂದು ಭರತ್ ಶೆಟ್ಟಿ ವೈ. ಟೀಕಿಸಿದ್ದಾರೆ.

ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯತೆ ,ದೇಶ ಪ್ರೇಮವನ್ನು ಬಿಂಬಿಸುವ ಪಠ್ಯಕ್ರಮವನ್ನು ಹಿಂಪಡೆದಿರುವುದು ದೇಶದಲ್ಲಿ ಮತ್ತೆ ಮತಾಂಧತೆಯ ಶಕ್ತಿಗಳು ವಿಜೃಂಭಿಸುವಂತೆ ಮಾಡುವಲ್ಲಿ ಸಂಶಯವಿಲ್ಲ, ಮತದಾರ ಕೇವಲ ಒಂದು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಎಡವಟ್ಟುಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರ ಸೂಕ್ತ ಉತ್ತರ ಒಂದನ್ನ ನೀಡಲಿದ್ದಾನೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು