News Karnataka Kannada
Monday, May 06 2024
ಮಂಗಳೂರು

ಕುಳಾಯಿ-ಹೊನ್ನಕಟ್ಟೆ 98 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭರತ್ ಶೆಟ್ಟಿ ಗುದ್ದಲಿಪೂಜೆ

Surathkal: Kulai-Honnakatte rs 98 lakh MLA Bharath Shetty performs guddali puja for various works at a cost
Photo Credit : News Kannada

ಸುರತ್ಕಲ್: ಕುಳಾಯಿ ಹೊನ್ನಕಟ್ಟೆ ಮಸೀದಿ ಪಕ್ಕದ ರಸ್ತೆ ಕಾಮಗಾರಿ ಸಹಿತ 98 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತಾಡಿದ ಶಾಸಕರು, “ಕುಳಾಯಿ ಹೊನ್ನಕಟ್ಟೆ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಒಂದು ತಿಂಗಳೊಳಗೆ ಮುಗಿಯಲಿದೆ. ಆ ಬಳಿಕ ಸುರತ್ಕಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಸುರತ್ಕಲ್ ಕ್ಷೇತ್ರವನ್ನು ಮಾದರಿಯನ್ನಾಗಿ ಪರಿವರ್ತಿಸಲು ವಿವಿಧ ವಾರ್ಡ್ ಗಳಲ್ಲಿ ರಸ್ತೆ ಅಭಿವೃದ್ಧಿ, ಪಾರ್ಕ್, ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ” ಎಂದರು.

ಕಾರ್ಪೋರೇಟರ್ ವರುಣ್ ಚೌಟ, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಗುತ್ತಿಗೆದಾರ ಶರಣ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು