News Karnataka Kannada
Thursday, May 09 2024
ಮಂಗಳೂರು

ಒಮ್ನಿ ವಾಹನಕ್ಕೆ ಸ್ವಿಫ್ಟ್ ಕಾರು ಡಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Swift car collides with omni vehicle, passengers critical
Photo Credit : News Kannada

ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.

ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.

ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರ ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು