Categories: ಮಂಗಳೂರು

ಬೆಳ್ತಂಗಡಿ: ಸಂಸತ್ತಿನಲ್ಲಿ ವಂದನಾರ್ಪಣೆಗೈದ ಡಾ. ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಗುರುವಾರ ಸಂಸತ್ತಿನಲ್ಲಿ ಸನ್ಮಾನ್ಯ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯ  ಸಲ್ಲಿಸುವ ಅವಕಾಶ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ದೊರಕಿತು.

ಪ್ರಧಾನ ಮಂತ್ರಿಗಳು ಮಾತನಾಡುವ ಮೊದಲು 10 ನಿಮಿಷದ ಅವಕಾಶವನ್ನು ಹೆಗ್ಗಡೆಯವರಿಗೆ ನೀಡಿದಾಗ ಅವರು ಮಾತನಾಡುತ್ತಾ ದೇಶದ ಭವಿಷ್ಯ ಗತವೈಭವದಲ್ಲಿಲ್ಲ, ಪ್ರಸ್ತುತ ವಿದ್ಯಮಾನಗಳು ಮುಂದಿನ ಉಜ್ವಲ ಪ್ರಗತಿಗೆ ಬುನಾದಿಯಾಗಿದೆ. ಯುವಜನತೆ ಇದರ ಪ್ರಯೋಜನ ಪಡೆಯಲೆಂದು ಹಾರೈಸುತ್ತೇನೆ ಎಂದರು.

ಕಾಶಿ ಶ್ರೀ ವಿಶ್ವನಾಥ ದೇವಾಲಯದ ಅಭಿವೃದ್ಧಿಯನ್ನು ಕಣ್ಣಾರೆ ನೋಡಿ ಆಶ್ಚರ್ಯಚಕಿತನಾಗಿದ್ದೇನೆ. ಈ ಮೊದಲು ಅಲ್ಲಿಗೆ 2 ಬಾರಿ ನಾನು ಭೇಟಿ ನೀಡಿದ್ದೇನೆ. ಅಂದಿಗೂ ಇಂದಿಗೂ ಇರುವ ವ್ಯತ್ಯಾಸ ಮತ್ತು ಅಲ್ಲಿನ ಅಭಿವೃದ್ಧಿಯನ್ನು ಕಂಡು ತುಂಬಾ ಸಂತೋಷಪಟ್ಟಿದ್ದೇನೆ. ಅದಕ್ಕಾಗಿ ಮಾನ್ಯ ಮೋದೀಜಿಯವರನ್ನು ಅಭಿನಂದಿಸುತ್ತಾ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಿಂದ ಶುಭಾಶಯವನ್ನು ಕೋರುತ್ತೇನೆ. ಇನ್ನು ಮುಂದಿನ ದಿನಗಳಲ್ಲಿ ರಾಷ್ಟ್ರದ ಪವಿತ್ರ ಕ್ಷೇತ್ರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಳ್ಳಲಿ ಎಂದು ಹಾರೈಸುತ್ತೇನೆ.

ನಮ್ಮ ಭವ್ಯಪರಂಪರೆಯ ಬಗ್ಗೆ ವಿದೇಶಿಯರಿಗೂ ಅಪಾರ ಅಭಿಮಾನ ಮತ್ತು ಗೌರವವಿದೆ. ಇಲ್ಲಿಂದ ವಿದೇಶಗಳಿಗೆ ಹೋದ ಆಧ್ಯಾತ್ಮಿಕ ಗುರುಗಳು, ನೇತಾರರು ಆರೋಗ್ಯ ರಕ್ಷಣೆಯಲ್ಲಿ ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯ ಮಹತ್ವವನ್ನು ಪ್ರಚಾರ ಮಾಡಿದ್ದಾರೆ. ಆರೋಗ್ಯ ರಕ್ಷಣೆಯಲ್ಲಿ ಸಿರಿಧಾನ್ಯಗಳ ಪಾತ್ರನೂ ಮಹತ್ವಪೂರ್ಣವಾಗಿದೆ. ಪ್ರಧಾನಿಯವರ `ಏಕ್ ಭಾರತ್ ಶ್ರೇಷ್ಠ ಭಾರತ್’ ಕಾರ್ಯಕ್ರಮ ವಿಶೇಷವಾಗಿ ಮಹತ್ವಪೂರ್ಣವಾಗಿದೆ ಎಂದು ಸಾರಿದ ಮಾನ್ಯ ಪ್ರಧಾನಮಂತ್ರಿಯವರನ್ನು ಅಭಿನಂದಿಸುತ್ತಾ ಭಾಷೆಗಳು ನಮ್ಮನ್ನು ವಿಭಜಿಸುವುದಿಲ್ಲ, ಬದಲಾಗಿ ಒಗ್ಗೂಡಿಸುತ್ತವೆ ಎಂದರು.

ನಮ್ಮ ಆಧ್ಯಾತ್ಮಿಕತೆ ಮತ್ತು ಪ್ರಸಿದ್ಧ ತೀರ್ಥಕ್ಷೇತ್ರಗಳ ಬಗ್ಗೆ ಯುವಜನತೆಗೆ ಅರಿವು, ಜಾಗೃತಿ ಮೂಡಿಸಬೇಕು. ಅವರಿಗೆ ಸೂಕ್ತ ಅವಕಾಶಗಳ ನಿರ್ಮಾಣ ಮಾಡಬೇಕು. ಕಾಶಿ, ಅಯೋಧ್ಯೆ, ಕೇದಾರನಾಥ ಮೊದಲಾದ ಪವಿತ್ರ ಕ್ಷೇತ್ರಗಳು ಅದ್ಭುತ ಸುಧಾರಣೆ ಕಂಡಿದೆ. ಸನ್ಮಾನ್ಯ ರಾಷ್ಟ್ರಪತಿಗಳು `ಕಾಯಕವೇ ಕೈಲಾಸ’ ಎಂಬ ಕರ್ನಾಟಕದ ಶ್ರೀ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಬಗ್ಗೆ ಮಾನ್ಯ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

28 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

45 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago