News Karnataka Kannada
Sunday, May 05 2024
ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್

The driver lost control of the car and hit an electric pole.
Photo Credit : News Kannada

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ‌. ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು