ಮಂಗಳೂರು: ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು ಕೊಲೆಯಾದ ವ್ಯಕ್ತಿ. ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಜನಾರ್ದನ ಬಾರಿಂಜ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ವೃತ್ತಿಯಲ್ಲಿ ಚಾಲಕನಾಗಿದ್ದು, ಇಂದು ಮಧ್ಯಾಹ್ನ ವೇಳೆ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…