Categories: ಮಂಗಳೂರು

ಸ್ಪೀಕರ್‌ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ, ಪೀಠದಲ್ಲಿ ಕೂರುವವರ ಸಮಸ್ಯೆ

ಮಂಗಳೂರು: ನಾನು ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಉಳ್ಳಾಲ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಜನರ, ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ. ಈ ಸ್ಥಾನ ನನ್ನ ಸೇವೆಗೆ ಅಡ್ಡಿ ಬರುವುದಿಲ್ಲ. ಈ ಹಂತಕ್ಕೆ ಬರಲು ಎಲ್ಲರ ಸಹಕಾರ, ಮಾರ್ಗದರ್ಶನ ಕಾರಣ. ಸಭಾಧ್ಯಕ್ಷ ಸ್ಥಾನ ಗೌರವದ ಮತ್ತು ಸಂವಿಧಾನಾತ್ಮಕ ಸ್ಥಾನ. ಸ್ಥಾನದ ಗೌರವ ಉಳಿಸಿಕೊಂಡು ಜಿಲ್ಲೆಗೆ ಮತ್ತು ಕ್ಷೇತ್ರಕ್ಕೆ ಗೌರವ ತರುತ್ತೇನೆ.

ವಿಧಾನಸಭೆಯಲ್ಲಿ ದ್ವೇಷ, ಆವೇಶ ಇಲ್ಲದೇ ಸದಸ್ಯರ ಜೊತೆ ಇರಬೇಕು. ಸಭಾಧ್ಯಕ್ಷ ಸ್ಥಾನದಲ್ಲಿ ಜನರ ಜೊತೆ ಒಡನಾಟದ ಜೊತೆ ಸ್ಥಾನದ ಘನತೆ ಕೂಡ ಉಳಿಸಬೇಕಿದೆ. ಈ ಹೊತ್ತಲ್ಲಿ‌ ಕ್ಷೇತ್ರದ ಜನತೆ ಕೂಡ ನನಗೆ ಬೆಂಬಲ ಕೊಡ್ತಾರೆ ಅನ್ನೋ ವಿಶ್ವಾಸವಿದೆ. ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಮಂತ್ರಿ ಸ್ಥಾನದ ಬಗ್ಗೆ ಹೆಚ್ಚು ತಿಳುವಳಿಕೆ ಇದೆ. ಆದರೆ ಸಭಾಧ್ಯಕ್ಷ ಸ್ಥಾನದ ಬಗ್ಗೆ ಹೆಚ್ಚಿನವರಿಗೆ ಗೊತ್ತಿರಲ್ಲಇದರಿಂದ ನಾನು ಅವರ ಕೈಗೆ ಸಿಗಲ್ಲ ಎಂಬ ಪ್ರೀತಿಯ ಆತಂಕ ಇದೆ. ಆದರೆ ಕೆಲವೇ ತಿಂಗಳುಗಳಲ್ಲಿ ಈ ಬಗ್ಗೆ ಅವರಿಗೆ ಅರಿವಾಗಲಿದೆ. ಪಕ್ಷದ ಹೈಕಮಾಂಡ್ ತೀರ್ಮಾನ ಇದು, ಅದಕ್ಕೆ ನಾನು‌ ಬದ್ದ.

ವಯಸ್ಸಿನಲ್ಲಿ ನಾನು ಕಿರಿಯ, ಆದರೆ ಅನುಭವದಲ್ಲಿ ‌ನಾನು ಹಿರಿಯ. ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ ಮಂತ್ರಿ. ಈಗ ಎಲ್ಲಾ ಇಲಾಖೆಯ ಮಂತ್ರಿಗಳು ಕೂಡ ನನ್ನ ವ್ಯಾಪ್ತಿಗೆ ಬರುತ್ತಾರೆ. ಆ ಮೂಲಕ ನಾನು ಕೆಲಸ ಮಾಡಿಸುವುದನ್ನು ಮಾಡುತ್ತೇನೆ. ಹಿಜಾಬ್ ನಿಷೇಧ ಸೇರಿ ಅನೇಕ ವಿಚಾರಗಳ ಬಗ್ಗೆ ಸರ್ಕಾರದ ನಿಲುವು ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಸಂವಿಧಾನಬದ್ದ ವಿಷಯಗಳು ಸುಪ್ರೀಂ ಕೋರ್ಟ್ ನಲ್ಲಿ ಇದೆ. ಸಂವಿಧಾನಕ್ಕೆ ವಿರುದ್ದವಾಗಿ ಸರ್ಕಾರ ಕೆಲಸ ಮಾಡುವುದಿಲ್ಲ. ಸಭಾಧ್ಯಕ್ಷನಾದ ಹಿನ್ನೆಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.

ಹೀಗಾಗಿ ನನ್ನ ವ್ಯಾಪ್ತಿಯಲ್ಲಿ ಸಂವಿಧಾನ ಬದ್ದವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತೇನೆ. ಸಭಾಧ್ಯಕ್ಷ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ. ಪೀಠದಲ್ಲಿ ಕೂರುವವರ ಸಮಸ್ಯೆ, ಕೂತವರು ಸರಿ ಇದ್ರೆ ಎಲ್ಲಾ ಸರಿ ಇರುತ್ತದೆ. ಪ್ರೋಟೊಕಾಲ್ ಅಂತ ಏನಿಲ್ಲ, ಜನರ ಪ್ರೀತಿಯೇ ಪ್ರೋಟೋಕಾಲ್. ಅಧಿಕಾರಿಗಳಿಗೂ ಈ ಬಗ್ಗೆ ಸೂಚನೆ ಕೊಟ್ಟಿದ್ದೇನೆ. ಸಾಮಾನ್ಯ ಜನರು ನನ್ನನ್ನು ತಲುಪಲು ಅವಕಾಶ ಕೊಡಿ ಅಂತ ಸೂಚಿಸಿದ್ದೇನೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. 70 ಶಾಸಕರಿಗೆ ತರಬೇತಿ ಕಾರ್ಯಾಗಾರ ಮಾಡುವ ಯೋಜನೆ ಇದೆ
ವಿಧಾನಸಭೆಯ ಕಾರ್ಯವೈಖರಿ, ಜನ ಸಾಮಾನ್ಯರ ಜತೆಗಿನ ಸಂಪರ್ಕದ ಬಗ್ಗೆ ಮೂರು ದಿನ ತರಬೇತಿ ಕಾರ್ಯಾಗಾರ ಮಾಡುತ್ತೇವೆ ಎಂದರು.

Ashika S

Recent Posts

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

11 mins ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

26 mins ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

49 mins ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

1 hour ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

1 hour ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

2 hours ago